Home » Scholarship: 1 ರಿಂದ 10 ನೇ ತರಗತಿಯ ವಿಧ್ಯಾರ್ಥಿಗಳಿಗೆ 2024-25-ನೇ ಸಾಲಿನ ವಿದ್ಯಾರ್ಥಿ ವೇತನ ಪಡೆಯಲು ಈ ರೀತಿಯ ಅರ್ಜಿ ಸಲ್ಲಿಸಿ

Scholarship: 1 ರಿಂದ 10 ನೇ ತರಗತಿಯ ವಿಧ್ಯಾರ್ಥಿಗಳಿಗೆ 2024-25-ನೇ ಸಾಲಿನ ವಿದ್ಯಾರ್ಥಿ ವೇತನ ಪಡೆಯಲು ಈ ರೀತಿಯ ಅರ್ಜಿ ಸಲ್ಲಿಸಿ

278 comments

Scholership: ರಾಜ್ಯ ಸರಕಾರದಿಂದ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲೆಂದು 2024-25ನೇ ಸಾಲಿನಲ್ಲಿ ವಿದ್ಯಾರ್ಥಿ ವೇತನ ಪಡೆಯಲು (SSP Scholarship-2024) 1 ರಿಂದ 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:
1) ಆಧಾರ್ ಕಾರ್ಡ್ ಜೆರಾಕ್ಸ್
2)ಶಾಲಾ ದಾಖಲಾತಿ ರಶೀದಿ ಅಥವಾ ಮುಖ್ಯ ಗುರುಗಳ ದಾಖಲಾತಿ ಪತ್ರ.
3) ಮೊಬೈಲ್ ನಂಬರ್ ಜೊತೆಗೆ ಒಟಿಪಿ
4)ಜಾತಿ ಮತ್ತು ಆದಾಯ ಪ್ರಮಾಣ ಪತ್ರ.
5)ವಿಕಲಚೇತನರಾಗಿದ್ದಲ್ಲಿ ಯು.ಡಿ.ಐ.ಡಿ. ಗುರುತಿನ ಸಂಖ್ಯೆ.
6)ಅರ್ಜಿದಾರರ ಇಮೇಲ್ ಐಡಿ.

ಅರ್ಜಿ ಸಲ್ಲಿಸುವ ವಿಧಾನ:
ಅರ್ಹ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈ ಕೆಳಗಡೆ ವಿಧಾನಗಳನ್ನು ಅನುಸರಿಸಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು.

1:ಮೊದಲಿಗೆ ಈ ಲಿಂಕ್ SSP Scholarship ಮೇಲೆ ಕ್ಲಿಕ್ ಮಾಡಿ ಅಧಿಕೃತ ಜಾಲತಾಣವನ್ನು ಪ್ರವೇಶ ಮಾಡಬೇಕಾಗುತ್ತದೆ. ಇದಾದ ನಂತರ ಇಲ್ಲಿ ಎರಡು ಆಯ್ಕೆಗಳು ತೋರಿಸುತ್ತದೆ. ಮೊದಲ ಬಾರಿಗೆ ಈ ವೆಬ್ಸೈಟ್ ಪ್ರವೇಶ ಮಾಡುತ್ತಿರುವವರು ಹೊಸ ಖಾತೆಯನ್ನು ಸೃಜಿಸಲು ಇಲ್ಲಿ ಕ್ಲಿಕ್ ಮಾಡಿ ಎನ್ನುವ ಆಯ್ಕೆಯ ಮೇಲೆ ಕ್ಲಿಕ್ ಮಾಡಿ ಮುಂದುವರೆಯಬೇಕು. ಒಂದು ವೇಳೆ ಈಗಾಗಲೇ ಖಾತೆಯನ್ನು ಮಾಡಿಕೊಂಡಿದ್ದರೆ ವಿದ್ಯಾರ್ಥಿಗಳು 2024-25ನೇ ಸಾಲಿನ ಮೇಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಆಯ್ಕೆಯನ್ನು ಕ್ಲಿಕ್ ಮಾಡಿ ಮುಂದುವರೆಯಬೇಕು.

2:ನಂತರ ಪೇಜ್ ನಲ್ಲಿ ವಿದ್ಯಾರ್ಥಿಗಳ ಲಾಗಿನ್ ಐಡಿ/USER ID, ಪಾಸ್ವರ್ಡ್/Password, ಕ್ಯಾಪ್ಚ್/Captcha, ಕೋಡನ್ನು ನಮೂದಿಸಿ “student login” ಬಟನ್ ಮೇಲೆ ಕ್ಲಿಕ್ ಮಾಡಬೇಕು.

3: student login” ಬಟನ್ ಮೇಲೆ ಕ್ಲಿಕ್ ಮಾಡಿದ ಬಳಿಕ ವಿದ್ಯಾರ್ಥಿಗಳ ವೈಯಕ್ತಿಕ ವಿವರ ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ ಕೊನೆಯಲ್ಲಿ “ಸಲ್ಲಿಸಿ/Submit” ಮೇಲೆ ಕ್ಲಿಕ್ ಮಾಡಬೇಕು.

ಅರ್ಜಿ ಸಲ್ಲಿಸಲು ನಿಮ್ಮ ಹತ್ತಿರದ ಗ್ರಾಮ ಒನ್ ಮತ್ತು ನಾಗರಿಕ ಸೇವಾ ಕೇಂದ್ರ ಹಾಗೂ ಸೇವಾ ಸಿಂಧು ಸೈಬರ್ ಗಳನ್ನು ಭೇಟಿ ಮಾಡಿ.

You may also like

Leave a Comment