Arecanut :ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಇಳಿಕೆಯತ್ತ ಸಾಗಿದ್ದ ಅಡಿಕೆ ಧಾರಣೆ ಇದೀಗ ಭರ್ಜರಿ ಏರಿಕೆಯಾಗಿದೆ. ಹೀಗಾಗಿ ಇದೀಗ ಅಡಿಕೆ ಧಾರಣೆ 80,000 ಗಡಿಯನ್ನು ದಾಟಿದರೂ ಆಶ್ಚರ್ಯವಿಲ್ಲ ಎಂದು ಹೇಳಲಾಗುತ್ತಿದೆ.
ಹೌದು, ದಾವಣಗೆರೆ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆ ಅಡಿಕೆ ಆಗಿದೆ. ಜಿಲ್ಲೆಯಲ್ಲಿ ಇಂದಿನ ಕ್ವಿಂಟಾಲ್ ಅಡಿಕೆ ಗರಿಷ್ಠ ದರ 59,820 ರೂಪಾಯಿ ಆಗಿದೆ. ಇಳಿಕೆಯತ್ತ ಸಾಗಿದ್ದ ದರ ಮತ್ತೆ ಇದೀಗ ದೊಡ್ಡ ಮಟ್ಟದಲ್ಲಿ ಏರಿಕೆಯಾಗಿದ್ದು, ಇದರಿಂದ ಬೆಳೆಗಾರರ ಮುಖದಲ್ಲಿ ಮಂದಹಾಸ ಮತ್ತಷ್ಟು ಹೆಚ್ಚಾದಂತಾಗಿದೆ. ಈ ತಿಂಗಳಲ್ಲೇ 8O,OOOO ರೂಪಾಯಿ ದಾಟಿದರೂ ಆಶ್ಚರ್ಯವಿಲ್ಲ.
ದಾವಣಗೆರೆ ಜಿಲ್ಲೆಯ ಚನ್ನಗಿರಿ, ಹೊನ್ನಾಳಿ ಭಾಗದಲ್ಲಿ ಇದೇ ವರ್ಷದ ಅಂದರೆ 2025ರ ಜನವರಿ ಕೊನೆಯಲ್ಲಿ 52,000 ರೂಪಾಯಿ ಒಳಗಿದ್ದ ಕ್ವಿಂಟಾಲ್ ಅಡಿಕೆ ದರ, ಫೆಬ್ರವರಿಯಲ್ಲಿ ಮತ್ತೆ 53,000 ರೂಪಾಯಿ ಗಡಿ ದಾಟಿತ್ತು. ಆಗಿನಿಂದಲೂ ಸತತ ಏರಿಕೆಯಾಗುತ್ತಾ ಬಂದಿತ್ತು. ಏಪ್ರಿಲ್ ಅಂತ್ಯದಲ್ಲಿ 60,000 ರೂಪಾಯಿ ಗಡಿ ದಾಟಿತ್ತು. ಆದರೆ, ಮೇ ಆರಂಭದಿಂದಲೂ ಜೂನ್ ಕೆಲವು ವಾರಗಳವರೆಗೆ ಇಳಿಕೆಯಾಗಿ ಮತ್ತೆ ಏರಿಕೆಯತ್ತ ಸಾಗಿತ್ತು. ಬಳಿಕ ಜೂನ್ ತಿಂಗಳ ಮಧ್ಯದಿಂದಲೂ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆ ಆಗುತ್ತಲೇ ಬಂದಿತ್ತು. ಆದರೆ, ಇದೀಗ ಭರ್ಜರಿಯಾಗಿ ಏರಿಕೆಯಾಗುತ್ತಲಿದೆ.
