Home » Arun Kumar Puttila: ಅರುಣ್‌ ಕುಮಾರ್‌ ಪುತ್ತಿಲರಿಗೆ ಕಲ್ಬುರ್ಗಿಗೆ ಗಡಿಪಾರು: ವಿಚಾರಣೆಗೆ ಹಾಜರಾಗಲು ನೋಟಿಸ್‌

Arun Kumar Puttila: ಅರುಣ್‌ ಕುಮಾರ್‌ ಪುತ್ತಿಲರಿಗೆ ಕಲ್ಬುರ್ಗಿಗೆ ಗಡಿಪಾರು: ವಿಚಾರಣೆಗೆ ಹಾಜರಾಗಲು ನೋಟಿಸ್‌

by Mallika
0 comments

Puttur: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೊಲೀಸರು ಹಿಂದೂ ಮುಖಂಡರ ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ಕಠಿಣ ಕ್ರಮ ಆರಂಭಿಸಿದ್ದು, ಕಲ್ಲಡ್ಕ ಪ್ರಭಾಕರ್‌ ಭಟ್‌ ಸೇರಿ 15 ಮಂದಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್‌ ದಾಖಲಾದ ಬೆನ್ನಲ್ಲೇ ಬಿಜೆಪಿ ಮುಖಂಡ ಅರುಣ್‌ ಕುಮಾರ್‌ ಪುತ್ತಿಲ ವಿರುದ್ಧ ಗಡೀಪಾರು ನೋಟಿಸ್‌ ನೀಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲಬುರ್ಗಿ ಜಿಲ್ಲೆಯ ಶಹಬಾದ್‌ ಪೊಲೀಸ್‌ ಠಾಣಾ ವ್ಯಾಪ್ತಿಗೆ ಗಡಿಪಾರು ಆದೇಶ ಹೊರಡಿಸುವ ಕುರಿತು ಕಂದಾಯ ಇಲಾಖೆ ಸಹಾಯಕ ಆಯುಕ್ತರು ಜೂ.6 ರಂದು ವಿಚಾರಣೆಯನ್ನು ನಿಗದಿ ಮಾಡಿದ್ದಾರೆ. ಅಲ್ಲದೇ ಈ ವಿಚಾರಣೆಗೆ ಅರುಣ್‌ ಕುಮಾರ್‌ ಪುತ್ತಿಲ ಅವರು ತಪ್ಪದೇ ಹಾಜರಾಗಲು ಸೂಚನೆ ನೀಡಲಾಗಿದೆ.

ಈ ಪ್ರಕರಣದ ಪ್ರಕಾರ ಸ್ವತಃ ಅರುಣ್‌ಕುಮಾರ್‌ ಪುತ್ತಿಲ ಅಥವಾ ನ್ಯಾಯವಾದಿಯವರ ಮೂಲಕ ವಿಚಾರಣೆಗೆ ಹಾಜರಾಗಿ ವಾದಿಸಬಹುದೆಂದು ಹೇಳಲಾಗಿರುವ ಕುರಿತು ವರದಿಯಾಗಿದೆ.

ಒಂದು ವೇಳೆ ಅರುಣ್‌ ಕುಮಾರ್‌ ಪುತ್ತಿಲ ಅವರು ವಿಚಾರಣೆಗೆ ಹಾಜರಾಗದೇ ಇದ್ದ ಪಕ್ಷದಲ್ಲಿ ಈ ಪ್ರಕರಣದಲ್ಲಿ ಆಸಕ್ತಿ ಇಲ್ಲವೆಂದು ಭಾವಿಸಿ ಏಕಪಕ್ರಿಯವಾಗಿ ತೀರ್ಮಾನ ಮಾಡಲಾಗುವುದು ಎಂದು ಕಂದಾಯ ಇಲಾಖೆಯ ಸಹಾಯಕ ಆಯುಕ್ತರು ತಿಳಿಸಿದ್ದಾರೆ.

ನೋಟಿಸ್‌ನಲ್ಲೇನಿದೆ?
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಮುಂಡೂರು ಗ್ರಾಮದ ಕೃಷ್ಣಯ್ಯ ಎಂಬುವವರ ಮಗ ಆರುಣ್ ಕುಮಾರ್ ಪುತ್ತಿಲ ಎಂಬಾತನ ವಿರುದ್ಧ ಕರ್ನಾಟಕ ಪೊಲೀಸ್ ಕಾಯ್ದೆ ಕಲಂ: 55 ರಂತೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲಬುರ್ಗಿ ಜಿಲ್ಲೆಯ ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡೀಪಾರು ಆದೇಶ ಹೊರಡಿಸುವ ಕುರಿತು ವಿಚಾರಣೆಯನ್ನು ದಿನಾಂಕ: 06-06-2025 ರಂದು ನಿಗದಿಪಡಿಸಲಾಗಿದೆ. ಸದ್ರಿ ವಿಚಾರಣೆಗೆ ತಪ್ಪದೇ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ನೋಟಿಸ್​​​ನಲ್ಲಿ ಉಲ್ಲೇಖಿಸಲಾಗಿದೆ.

You may also like