2
ಸಮಾಜದಲ್ಲಿ ಪ್ರತಿಯೊಂದು ಸೇವೆಗಳಿಗೆ ತನ್ನದೇ ಆದ ವೇತನ ಅದರದ್ದೇ ಆದ ಸ್ಥಾನ ಮಾನ ಇರುತ್ತದೆ. ಹಾಗೆಯೇ ಆಶಾ ಕಾರ್ಯಕರ್ತೆಯರು ಆರೋಗ್ಯ ಇಲಾಖೆಗೆ ಸೇವೆ ಸಲ್ಲಿಸುತ್ತಿರುವುದು ನಮಗೆ ಗೊತ್ತಿರುವ ವಿಚಾರ ಆಗಿದೆ. ಅಲ್ಲದೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಯಲ್ಲಿ ಆಶಾ ಕಾರ್ಯಕರ್ತೆಯರ ಪಾತ್ರ ಬಹಳ ಮುಖ್ಯವಾಗಿದೆ.
ಪ್ರಸ್ತುತ ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರದಿಂದ ದೀಪಾವಳಿ ಬೆಳಕಿನ ಹಬ್ಬದ ಪರವಾಗಿ ಉಡುಗೊರೆ ನೀಡಿದೆ.
ಹೌದು ರಾಜ್ಯ ಸರ್ಕಾರವು ಆಶಾ ಕಾರ್ಯಕರ್ತೆಯರಿಗೆ ಒಂದು ಸಾವಿರ ಗೌರವ ಧನವನ್ನು ಹೆಚ್ಚಳ ಮಾಡಿರುವ ಮಾಹಿತಿ ನೀಡಿದ್ದಾರೆ.
ಆಶಾ ಕಾರ್ಯಕರ್ತೆಯರ ಸಂಖ್ಯೆಗೆ ಅನುಗುಣವಾಗಿ ಅದೇಶವನ್ನು ಹೊರಡಿಸಿದ್ದು, ಈ ಮೂಲಕ ದೀಪಾವಳಿ ಹಬ್ಬದ ಪ್ರಯುಕ್ತ ಆಶಾ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ ದೊರೆತಂತೆ ಆಗಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆದೇಶದ ಪ್ರಕಾರ ಸೆಪ್ಟಂಬರ್, ಆಕ್ಟೋಬರ್, ನವೆಂಬರ್ ತಿಂಗಳ ತನಕ ಮೂರು ತಿಂಗಳ ಗೌರವ ಧನವನ್ನು ಹೆಚ್ಚಳ ಮಾಡಿ ಆದೇಶವನ್ನು ಹೊರಡಿಸಿದೆ.
