7
Supreme Court: ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು ಅಧಿಕಾರವಹಿಸಿಕೊಂಡ ಬಳಿಕ ತಮ್ಮ ಆಸ್ತಿ ವಿವರಗಳನ್ನು ಸಾರ್ವಜನಿಕವಾಗಿ ಘೋಷಣೆ ಮಾಡಲು ಸಿಜೆಐ ಸೇರಿದಂತೆ ಸುಪ್ರೀಂಕೋರ್ಟ್‌ನ ನ್ಯಾಯಾಧೀಶರು ನಿರ್ಧರಿಸಿದ್ದಾರೆ.
ಗುರುವಾರ ನವದೆಹಲಿಯಲ್ಲಿ ಸೇರಿದ್ದ ಸುಪ್ರೀಂಕೋರ್ಟನ 30 ನ್ಯಾಯಾಧೀಶರನ್ನು ಒಳಗೊಂಡ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಆಸ್ತಿ ವಿವರಗಳ ಬಹಿರಂಗದ ಜೊತೆಗೆ ಅದರ ಅಂಕಿ ಅಂಶಗಳನ್ನು ಸುಪ್ರಿಂಕೋರ್ಟ್ ಅಧಿಕೃತ ವೆಬ್‌ಸೈಟ್‌ನಲ್ಲಿ ಅಪ್ಲೋಡ್ ಮಾಡಲಾಗುವುದು.
ಜೊತೆಗೆ ‘ನ್ಯಾಯಾಧೀಶರು ಅಧಿಕಾರ ವಹಿಸಿಕೊಳ್ಳುವಾಗ ಮತ್ತು ಯಾವುದೇ ಸ್ವರೂಪದ ಆಸ್ತಿಯನ್ನು ಖರೀದಿಸಿದರೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶರಿಗೆ ತಮ್ಮ ಆಸ್ತಿ ವಿವರವನ್ನು ನೀಡಬೇಕು. ಇನ್ನು ವೆಬ್‌ಸೈಟ್‌ನಲ್ಲಿ ಆಸ್ತಿಗಳ ಘೋಷಣೆ ಮಾಡುವುದು ಸ್ವಯಂಪ್ರೇರಿತವಾಗಿರುತ್ತದೆ’ ಎಂದು ಸುಪ್ರೀಂ ಕೋರ್ಟ್ ವೆಬ್‌ಸೈಟ್ ತಿಳಿಸಿದೆ. ಈ ತೀರ್ಮಾನ ಭವಿಷ್ಯದ ಸುಪ್ರಿಂಕೋರ್ಟ್ ನ್ಯಾಯಾಧೀಶರಿಗೂ ಅನ್ವಯಿಸಲಿದೆ.
