ಅಕ್ಟೋಬರ್ ತಿಂಗಳಲ್ಲಿ ನಿಯಮಗಳಲ್ಲಿ ಅನೇಕ ಬದಲಾವಣೆಗೆ ಸರ್ಕಾರ ಮುನ್ನುಡಿ ಬರೆದಿದ್ದು, ತೆರಿಗೆಯ ಜೊತೆಗೆ ಅಟಲ್ ಪಿಂಚಣಿ ಯೋಜನೆಗೆ ಸಂಬಂಧಿಸಿದ ಬದಲಾವಣೆಗಳು ಕೂಡ ಸೇರಿದೆ. ಜಿಎಸ್ ಟಿ ಇ-ಇನ್ ವಾಯ್ಸ್ ನಿಯಮ ಬದಲಾಗಲಿದ್ದು, ಜಿ. ಎಸ್ ಟಿ ಪಾವತಿದಾರರ ಮೇಲೆ ಗಂಭೀರ ಪ್ರಭಾವ ಬೀರಲಿದೆ. ಇದಲ್ಲದೆ ಆದಾಯ ತೆರಿಗೆ ಪಾವತಿದಾರರಿಗೂ ಹೊಡೆತ ಬೀಳುವ ಸಾಧ್ಯತೆ ಹೆಚ್ಚಿದೆ.
ಕೇಂದ್ರ ಸರ್ಕಾರ ಅಟಲ್ ಪಿಂಚಣಿ ಯೋಜನೆ (APY) ಹೂಡಿಕೆ ನಿಯಮಗಳನ್ನು ಬದಲಾಯಿಸಲಿದೆ. ಇದರಿಂದ ಹಲವರು ಗೊಂದಲಕ್ಕೀಡಾಗಿದ್ದಾರೆ. ಅಟಲ್ ಪಿಂಚಣಿ ಯೋಜನೆಯ ಹೊಸ ಬದಲಾವಣೆ ಅಕ್ಟೋಬರ್ 1 ರಿಂದ ಜಾರಿಗೆ ಬರಲಿದೆ. ಅಟಲ್ ಪಿಂಚಣಿ ಯೋಜನೆಯನ್ನು ಕೇಂದ್ರ ಸರ್ಕಾರ 2015-16ನೇ ಸಾಲಿನ ಬಜೆಟ್ ನಲ್ಲಿ ಘೋಷಣೆ ಮಾಡಿತ್ತು. ಈ ಯೋಜನೆಯನ್ನು ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ ಅಡಿಯಲ್ಲಿ ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (PFRDA) ನಿರ್ವಹಿಸುತ್ತದೆ.
APY ಯೋಜನೆಯಡಿಯಲ್ಲಿ, ಚಂದಾದಾರರು 60 ವರ್ಷಗಳನ್ನು ತಲುಪಿದ ನಂತರ ನಿಶ್ಚಿತ ಪಿಂಚಣಿ ಮೊತ್ತವನ್ನು ಪಡೆಯುತ್ತಾರೆ. ಕಡಿಮೆ ಹೂಡಿಕೆಯಲ್ಲಿ ಪಿಂಚಣಿಯನ್ನು ಖಾತರಿಪಡಿಸಲು ಅಟಲ್ ಯೋಜನೆಯು ಉತ್ತಮ ಆಯ್ಕೆಯಾಗಿದ್ದು, ಕೇಂದ್ರ ಸರ್ಕಾರದ ಈ ಯೋಜನೆ ವೃದ್ಧಾಪ್ಯದಲ್ಲಿ ಆದಾಯ ಭದ್ರತೆ ನೀಡುವ ಜೊತೆಗೆ ಅಸಂಘಟಿತ ವಲಯದ ಎಲ್ಲ ನಾಗರಿಕರನ್ನು ಕೇಂದ್ರೀಕರಿಸಿದೆ.
ಇಲ್ಲಿಯ ತನಕ 18 ಹಾಗೂ 40 ವರ್ಷಗಳ ನಡುವಿನ ಭಾರತದ ಎಲ್ಲ ನಾಗರಿಕರು ಅವರ ತೆರಿಗೆ ಪಾವತಿ ಸ್ಥಿತಿಗತಿಗಳನ್ನು ಹೊರತುಪಡಿಸಿ ಈ ಯೋಜನೆಗೆ ಸೇರ್ಪಡೆಗೊಳ್ಳಲು ಅರ್ಹರಾಗಿದ್ದರು. ಈ ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರ ಚಂದಾದಾರರ ಕೊಡುಗೆಯ ಶೇ.50ರಷ್ಟನ್ನು ಅಥವಾ ವಾರ್ಷಿಕ 1,000ರೂ. ಇದರಲ್ಲಿ ಯಾವುದು ಕಡಿಮೆಯೋ ಅದನ್ನು ನೀಡುತ್ತದೆ. ಸರ್ಕಾರದ ಈ ಕೊಡುಗೆ ಇಲ್ಲಿಯ ತನಕ ಇತರ ಸಾಮಾಜಿಕ ಭದ್ರತ ಯೋಜನೆಗಳ ಫಲಾನುಭವಿ ಆಗದಿರೋರಿಗೆ ಮಾತ್ರ ಲಭಿಸುತ್ತಿತ್ತು. ಅಲ್ಲದೆ, ಇಲ್ಲಿಯ ತನಕ ಆದಾಯ ತೆರಿಗೆ ಪಾವತಿಗೆ ಸಂಬಂಧಿಸಿದ ಯಾವುದೇ ಷರತ್ತು ಇರಲಿಲ್ಲ. ಆದರೆ,ಈಗ ಹೊಸ ನಿಯಮಗಳ ಪ್ರಕಾರ, ತೆರಿಗೆ ಪಾವತಿದಾರರು ಅಕ್ಟೋಬರ್ 1, 2022 ರಿಂದ ಅಟಲ್ ಪಿಂಚಣಿ ಯೋಜನೆ ಅಡಿಯಲ್ಲಿ ಖಾತೆಯನ್ನು ತೆರೆಯಲು ಸಾಧ್ಯವಾಗುವುದಿಲ್ಲ.
ಹಾಗೆಯೇ 10 ಕೋಟಿ ರೂ. ಹಾಗೂ ಅದಕ್ಕಿಂತ ಹೆಚ್ಚಿನ ಮೊತ್ತದ ವಹಿವಾಟು ನಡೆಸುವ ಉದ್ಯಮಗಳು ಅಕ್ಟೋಬರ್ 1ರಿಂದ ಇ-ಇನ್ ವಾಯ್ಸ್ ಸಲ್ಲಿಕೆ ಮಾಡೋದು ಕಡ್ಡಾಯವಾಗಿದೆ. ಉದ್ಯಮಗಳಿಂದ ಆದಾಯ ಸೋರಿಕೆ ತಡೆ ಹಾಗೂ ಉತ್ತಮ ತೆರಿಗೆ ಸಂಗ್ರಹದ ಉದ್ದೇಶದಿಂದ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಈ ಯೋಜನೆಯಲ್ಲಿ ಭಾಗವಹಿಸಿದ ನಂತರ 60 ವರ್ಷಗಳ ನಂತರ ನಿಯಮಿತ ಆದಾಯವು ಪ್ರಾರಂಭವಾಗುತ್ತದೆ ಎಂಬುದನ್ನು ಇಲ್ಲಿ ಗಮನಿಸಬೇಕು. ಸರಕು ಹಾಗೂ ಸೇವಾ ತೆರಿಗೆ ಅಡಿಯಲ್ಲಿ ಅಥವಾ ಜಿಎಸ್ ಟಿ ತೆರಿಗೆ ವ್ಯಾಪ್ತಿಯಲ್ಲಿ 10 ಕೋಟಿ ರೂ. ಹಾಗೂ ಅದಕ್ಕಿಂತ ಹೆಚ್ಚಿನ ವಹಿವಾಟು ನಡೆಸುವ ಉದ್ಯಮಗಳಿಗೆ ಅಕ್ಟೋಬರ್ 1ರಿಂದ ಇ-ಇನ್ ವಾಯ್ಸ್ ಕಡ್ಡಾಯವಾಗಲಿದೆ. ಪ್ರಸ್ತುತ ಸರ್ಕಾರ ಈ ಮಿತಿಯನ್ನು 20 ಕೋಟಿ ರೂ.ಗೆ ನಿಗದಿಪಡಿಸಿದ್ದು, ಮುಂದಿನ ತಿಂಗಳಿಂದ 10 ಕೋಟಿ ರೂ.ಗೆ ಇಳಿಕೆ ಮಾಡುವ ಸಾಧ್ಯತೆಯಿದೆ.
ಈ ಕುರಿತ ಅಧಿಸೂಚನೆಯನ್ನು ನೇರ ತೆರಿಗೆಗಳು ಹಾಗೂ ಸುಂಕಗಳ ಕೇಂದ್ರೀಯ ಮಂಡಳಿ (CBIC) ಆಗಸ್ಟ್ 1ರಂದು ಹೊರಡಿಸಿತ್ತು. ಜಿಎಸ್ ಟಿ ಮಂಡಳಿಯ ಶಿಫಾರಸ್ಸುಗಳ ಆಧಾರದಲ್ಲಿ ನಿಯಮಗಳನ್ನು ರೂಪಿಸಲಾಗಿದೆ.
ಆಟಲ್ ಪಿಂಚಣಿ ಯೋಜನೆಯ ಯೋಜನೆಯಡಿ, ನಿವೃತ್ತಿಯ ನಂತರ, ಪ್ರತಿ ತಿಂಗಳು ಖಾತೆಗೆ ನಿಗಧಿತ ಮೊತ್ತ ಪಾವತಿಸಿದ ನಂತರ, ಮಾಸಿಕ 1 ಸಾವಿರದಿಂದ 5 ಸಾವಿರ ಪಿಂಚಣಿ ಲಭ್ಯವಿರುತ್ತದೆ. ಪ್ರತಿ 6 ತಿಂಗಳಿಗೆ ಕೇವಲ 1,239 ರೂಪಾಯಿಗಳನ್ನು ಹೂಡಿಕೆ ಮಾಡಿದ ನಂತರ 60 ವರ್ಷಗಳ ನಂತರ ವಾರ್ಷಿಕವಾಗಿ 60,000 ರೂಪಾಯಿಗಳ ಜೀವಿತಾವಧಿಯ ಪಿಂಚಣಿ ತಿಂಗಳಿಗೆ 5000 ರೂಪಾಯಿಗಳ ಖಾತರಿಯನ್ನು ಸರ್ಕಾರ ನೀಡುತ್ತಿದೆ.
ಈ ಯೋಜನೆಗಳಲ್ಲಿ ನ ಬದಲಾವಣೆಗಳು ಆದಾಯ ತೆರಿಗೆದಾರರಾಗಿದ್ದು, ಅಟಲ್ ಪಿಂಚಣಿ ಯೋಜನೆಯಲ್ಲಿ ಹೂಡಿಕೆ ಮಾಡಲು ಬಯಸುವರಿಗೆ ನೇರ ಪರಿಣಾಮ ಬೀರಲಿದೆ.
