Pakistan: ಪಾಕಿಸ್ತಾನದಿಂದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಸರ್ಕಾರ ‘ಆಪರೇಷನ್ ಸಿಂಧೂರ್’ ಅನ್ನು ಪ್ರಾರಂಭಿಸಿ 200 ಭಯೋತ್ಪಾದಕರನ್ನು ಹತ್ಯೆ ಮಾಡಿದೆ. ಇದು ವಿಶ್ವದಾದ್ಯಂತ ಸುದ್ದಿಯಾಗುತ್ತಿರುವ ಹೊತ್ತಲ್ಲೇ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಮುಂದಿನ 24 ಗಂಟೆಗಳಲ್ಲಿ ಭಾರತದ ಮೇಲೆ ದಾಳಿ ಮಾಡುವುದಾಗಿ ಹೇಳಿದ್ದಾರೆ.
ಇಂದು ಪಾಕ್ ಸಂಸತ್ತಿನಲ್ಲಿ ಮಾತನಾಡುತ್ತಾ ಈ ಬಗ್ಗೆ ಮಾಹಿತಿ ನೀಡಿದ ಶೆಹಬಾಜ್ ಷರೀಫ್ ‘ನಮಗೆ ಸಾಮರ್ತ್ಯವಿದ್ದರು ಕೂಡ ನಾವು ಸಂಯಮದಿಂದ ನೋಡಿದ್ದೇವೆ. ಭಾರತೀಯ ಆಡಳಿತದ ಕಾಶ್ಮೀರ ಪ್ರದೇಶದಲ್ಲಿ ಏಪ್ರಿಲ್ 22 ರಂದು ನಡೆದ ಪಹಲ್ಗಾಮ್ ದಾಳಿಯೊಂದಿಗೆ ಇಸ್ಲಾಮಾಬಾದ್ ಯಾವುದೇ ಸಂಬಂಧವಿಲ್ಲ. ಆದರೂ ಭಾರತ ನಮ್ಮ ಮೇಲೆ ದಾಳಿ ನಡೆಸಿದ. ಹೀಗಾಗಿ ಮುಂದಿನ 24 ಘಂಟೆಗಳಲ್ಲಿ ಭಾರತದ ಮೇಲೆ ದಾಳಿ ಮಾಡಲಾಗುವುದು ಅಂತ ತಿಳಿಸಿದ್ದಾರೆ.
