Home » Vitla: ಆಟೋ ಚಾಲಕ ನಾಪತ್ತೆ – ಪ್ರಕರಣ ದಾಖಲು !!

Vitla: ಆಟೋ ಚಾಲಕ ನಾಪತ್ತೆ – ಪ್ರಕರಣ ದಾಖಲು !!

0 comments

Vitla: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದಲ್ಲಿ ಆಟೋ ಚಾಲಕರು ಒಬ್ಬರು ನಾಪತ್ತೆಯಾಗಿದ್ದಾರೆ. ಈ ಬಗ್ಗೆ ವಿಟ್ಲ(Vitla) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಾಪತ್ತೆಯಾಗಿರುವವರು ವೀರಕಂಬ(Veerakamba) ಗ್ರಾಮದ ಬಾಯಿಲ ನಿವಾಸಿ ಧನರಾಜ್‌( 28) ಆಟೋ ಚಾಲಕ. ಅವರು ನ.28 ರಂದು ಎಂದಿನಂತೆ ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಬಾಯಿಲದಿಂದ ಬೆಳಿಗ್ಗೆ 8.30 ಗಂಟೆಗೆ ಅಟೋ ರಿಕ್ಷಾವನ್ನು ತೆಗೆದುಕೊಂಡು ಬಾಡಿಗೆಗೆ ಹೋಗುತ್ತೇನೆಂದು ಹೇಳಿ ಹೋದವನು ಡಿ.3 ರವರೆಗೂ ಮನೆಗೆ ಬಂದಿರಲ್ಲ ಎನ್ನಲಾಗಿದೆ.

ಈ ಬಗ್ಗೆ ಸಂಬಂಧಿಕರಲ್ಲಿ, ನೆರೆಕರೆಯವರಲ್ಲಿ ಹಾಗೂ ಸ್ನೇಹಿತರಲ್ಲಿ ವಿಚಾರಿಸಲಾಗಿದೆ. ಆದರೆ ಅವರು ಎಲ್ಲಿಯೂ ಪತ್ತೆಯಾಗದೆ ಕಾಣೆಯಾಗಿರುತ್ತಾನೆ. ಧನರಾಜ್‌ನ ರಿಕ್ಷಾ ಮಾತ್ರ ಉಪ್ಪಿನಂಗಡಿಯಲ್ಲಿದ್ದು, ಆತನ ಮೊಬೈಲ್‌ ಸ್ವೀಚ್‌ ಆಫ್‌ ಆಗಿರುತ್ತದೆ. ಸದ್ಯ ಈ ಬಗ್ಗೆ ಪ್ರಕರಣ ದಾಖಲಾಗಿದೆ.

You may also like

Leave a Comment