Home » Bengaluru: ಬಿ.ಇ ಪದವೀಧರ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ

Bengaluru: ಬಿ.ಇ ಪದವೀಧರ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ

0 comments
Indian Railway

Bengaluru: ಬೆಂಗಳೂರಿನ ನಾಗರಬಾವಿ ಮೂಲದ ಬಿ.ಇ ಪದವೀಧರ (B.E Graduate) ಯುವಕ ರೈಲಿಗೆ (Train) ತಲೆಕೊಟ್ಟು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮನಗರ (Ramanagara) ರೈಲ್ವೆ ನಿಲ್ದಾಣದ ಸಮೀಪ ನಡೆದಿದೆ.

ಮಧು (23) ಆತ್ಮಹತ್ಯೆ ಮಾಡಿಕೊಂಡ ಯುವಕ. ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಮಧು, ಬುಧವಾರ ರಾತ್ರಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ರೈಲು ಹರಿದ ರಭಸಕ್ಕೆ ಯುವಕನ ದೇಹ ಚೆಲ್ಲಾ ಪಿಲ್ಲಿಯಾಗಿದೆ. ಸದ್ಯ ವಿಚಾರ ತಿಳಿದ ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮೃತದೇಹ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಬಳಿಕ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ.

You may also like

Leave a Comment