Home » B Y Vijayendra: ಯಕ್ಷಗಾನ ಕಲಾವಿದರ ಕುರಿತು ವಿವದಾತ್ಮಕ ಹೇಳಿಕೆ- ಬಿಳಿಮಲೆ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಕ್ರೋಶ

B Y Vijayendra: ಯಕ್ಷಗಾನ ಕಲಾವಿದರ ಕುರಿತು ವಿವದಾತ್ಮಕ ಹೇಳಿಕೆ- ಬಿಳಿಮಲೆ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಕ್ರೋಶ

0 comments

B Y Vijayendra : ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಗಳು ಎಂದು ಹೇಳಿಕೆ ನೀಡಿರುವ ಕನ್ನಡಪರ ಚಿಂತಕ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪುರುಷೋತ್ತಮ ಬಿಳಿಮಲೆಯವರ ವಿರುದ್ಧ ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಮಾತನಾಡಿದ ಅವರು, ಬಹುತೇಕ ಯಕ್ಷಗಾನ ಕಲಾವಿದರು ಸಲಿಂಗಕಾಮಿಗಳು ಎಂದು ಹೇಳುವ ಮೂಲಕ ಪುರುಷೋತ್ತಮ ಬಿಳಿಮಲೆ ಕರಾವಳಿಯ ಕಲೆ, ಸಂಸ್ಕೃತಿ ಹಾಗೂ ಹಿಂದು ಸಮಯದಾಯಕ್ಕೆ ಅಪಮಾನಗೈದಿದ್ದಾರೆ. ಈ ರೀತಿಯ ಬೇಜವಾಬ್ದಾರಿ ಹೇಳಿಕೆ ನೀಡಿದ ಬಿಳಿಮನೆಯನ್ನು ಕೂಡಲೇ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನದಿಂದ ರಾಜ್ಯ ಸರ್ಕಾರ ಕಿತ್ತೆಸೆಯಬೇಕು. ಒಂದು ವೇಳೆ ಸರ್ಕಾರ ಈ ಕ್ರಮ ಕೈಗೊಳ್ಳದೇ ಇದ್ದರೆ ರಸ್ತೆಗಿಳಿದು ಹೋರಾಟ ನಡೆಸುವುದಾಗಿ ಬಿ.ವೈ ವಿಜಯೇಂದ್ರ ಎಚ್ಚರಿಕೆ ನೀಡಿದ್ದಾರೆ.

ಬಿಳಿಮಲೆ ಅವರು ಹೇಳಿದ್ದೇನು?
ಮೈಸೂರಿನ ಮಾನಸಗಂಗೋತ್ರಿಯ ಪ್ರಸಾರಾಂಗದಲ್ಲಿ ಮಂಗಳವಾರ ‘ಧರೆಗೆ ದೊಡ್ಡವರ ಕಾವ್ಯದ ಏಳು ಪಠ್ಯಗಳು’ ಹಾಗೂ ‘ನಾವು ಕೂಗುವ ಕೂಗು’ ಕೃತಿಗಳನ್ನು ಬಿಡುಗಡೆ ಮಾಡಿದ ಅವರು, ಯಕ್ಷಗಾನ ಕಲಾವಿದರಲ್ಲಿ ಅನೇಕರು ಸಲಿಂಗಿಗಳು. ಅಲ್ಲಿ ಅಂಥ ಅನಿವಾರ್ಯತೆ ನಿರ್ಮಾಣವಾಗಿತ್ತು. ಕಲಾವಿದರು ಮೇಳಕ್ಕೆಂದು ಆರೆಂಟು ತಿಂಗಳು ತಿರುಗಾಟದಲ್ಲೇ ಇರುತ್ತಿದ್ದರಿಂದ ಅವರಿಗೆ ಯಾರೂ ಹೆಣ್ಣು ಕೊಡುತ್ತಿರಲಿಲ್ಲ. ಅಲ್ಲಿನ ಸ್ತ್ರೀ ವೇಷಧಾರಿಗಳೂ ಒತ್ತಡದಲ್ಲಿರುತ್ತಿದ್ದರು. ಹೀಗಾಗಿ ಅವರಿಗೆ ಇತರರಿಗೆ ಮೋಹವೇ ಇದ್ದಿದ್ದು ಉಂಟು. ಎಷ್ಟೋ ಬಾರಿ ಸ್ತ್ರೀ ವೇಷದ ಕಲಾವಿದ ಏನಾದರೂ ಸಲಿಂಗಕಾಮ ನಿರಾಕರಣೆ ಮಾಡಿದ್ದರೆ, ಭಾಗವತರು ಮರು ದಿವಸ ಅವರಿಗೆ ಪದ್ಯವನ್ನೇ ಕೊಡುತ್ತಿರಲಿಲ್ಲ. ರಂಗಭೂಮಿಯ ಮೇಲೆ ಅವನ ವಿರುದ್ಧ ಸೇಡು ತೀರಿಸಿಕೊಳ್ಳುವುದಿತ್ತು. ಮೇಳದಲ್ಲಿ ಅವಕಾಶ ಇಲ್ಲದೆ ಹೋದರೆ ಬದುಕೇ ಇಲ್ಲವೆಂಬ ಒತ್ತಡಕ್ಕೆ ಕಲಾವಿದರು ಒಳಗಾಗಿರುವ ಉದಾಹರಣೆಗಳು ಸಹ ಇವೆ ಎಂದಿದ್ದಾರೆ.

ಇಷ್ಟೇ ಅಲ್ಲದೆ ‘ಅಂದಿನ ಕಾಲದಲ್ಲಿ ಕಲಾವಿದರು ಮೇಳಕ್ಕೆಂದು ಹೋಗಿ ವಾಪಸಾಗುವ ಸಂದರ್ಭದಲ್ಲಿಯೂ ಹಲವರಿಗೆ ಮನೆಯೇ ಇರುತ್ತಿರಲಿಲ್ಲ. ಪ್ರವಾಹಕ್ಕೆ ಕೊಚ್ಚಿ ಹೋಗಿರುವ ಉದಾಹರಣೆಗಳು ಸಹ ಇವೆ. ಈ ರೀತಿಯ ದುರಂತ ಕಾವ್ಯಗಳು ಅವರ ಬದುಕಿನಲ್ಲಿವೆ. ಅವನ್ನು ಗ್ರಹಿಸುವ ಶಕ್ತಿ ಸಮಾಜಕ್ಕೆ ಇಲ್ಲ. ಹಾಡಿನ ಚಪ್ಪಾಳೆಯಷ್ಟೇ ಮುಖ್ಯವಾಗಲೇ ಬಾರದು. ಯಕ್ಷಗಾನ ಕಲಾವಿದರ ಬದುಕಿನ ಬಿಕ್ಕಟ್ಟಿನ ಕಾವ್ಯಕ್ಕೆ ಅಕ್ಷರಸ್ಥರು, ವಿದ್ವಾಂಸರು ದನಿಯಾಗಬೇಕು ಎಂದು ಅವರು ಹೇಳಿದ್ದಾರೆ.

You may also like