Home » Western Ghats: ಪಶ್ಚಿಮ ಘಟ್ಟ ಪ್ರದೇಶದಲ್ಲಿ ನಿರಂತರ ಭೂಕುಸಿತ ಹಿನ್ನೆಲೆ – ಧಾರಣಾ ಸಾಮರ್ಥ್ಯ ಅಧ್ಯಯನಕ್ಕೆ ಸಮಿತಿ ರಚನೆ – ಸದ್ಯಕ್ಕೆ ಮರ ಕಡಿಯಲು ಅನುಮತಿ ಇಲ್ಲ

Western Ghats: ಪಶ್ಚಿಮ ಘಟ್ಟ ಪ್ರದೇಶದಲ್ಲಿ ನಿರಂತರ ಭೂಕುಸಿತ ಹಿನ್ನೆಲೆ – ಧಾರಣಾ ಸಾಮರ್ಥ್ಯ ಅಧ್ಯಯನಕ್ಕೆ ಸಮಿತಿ ರಚನೆ – ಸದ್ಯಕ್ಕೆ ಮರ ಕಡಿಯಲು ಅನುಮತಿ ಇಲ್ಲ

0 comments
Western Ghat

Western Ghats: ಪಶ್ಚಿಮಘಟ್ಟದ ಧಾರಣಾ ಸಾಮರ್ಥ್ಯದ ಅಧ್ಯಯನಕ್ಕೆ ಅರಣ್ಯ ಪಡೆ ಮುಖ್ಯಸ್ಥರ ನೇತೃತ್ವದಲ್ಲಿ ಸಮಿತಿಯನ್ನು ಸರ್ಕಾರ ರಚಿಸಿದೆ. 6 ತಿಂಗಳಲ್ಲಿ ವರದಿ ಸಲ್ಲಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಸಮಿತಿಗೆ ಸೂಚಿಸಿದ್ದಾರೆ. ವಿಕಾಸಸೌಧದ ಕಚೇರಿಯಲ್ಲಿ ಬುಧವಾರ ರಾಜ್ಯ ಜೀವವೈವಿಧ್ಯ ಮಂಡಳಿ ವಿಶೇಷ ಸಭೆಯ ಅಧ್ಯಕ್ಷತೆ ವಹಿಸಿದ್ದ ಸಚಿವರು, ಪಶ್ಚಿಮ ಘಟ್ಟ ಪ್ರದೇಶದಲ್ಲಿ ನಿರಂತರ ಭೂಕುಸಿತ ಸಂಭವಿಸಿ ಜೀವಹಾನಿ ಉಂಟಾಗುತ್ತಿದೆ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದರು.

ಈ ನಿಟ್ಟಿನಲ್ಲಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಪಡೆ ಮುಖ್ಯಸ್ಥ ಮೀನಾಕ್ಷಿ ನೇಗಿ ನೇತೃತ್ವದಲ್ಲಿ ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ, ಕರ್ನಾಟಕ ಜೀವ ವೈವಿಧ್ಯ ಮಂಡಳಿ ಹಾಗೂ ತಜ್ಞರು ಒಳಗೊಂಡ ಸಮಿತಿಯನ್ನು 10 ದಿನಗಳ ಒಳಗಾಗಿ ರಚಿಸಬೇಕು. ಈ ಸಮಿತಿ 6 ತಿಂಗಳಲ್ಲಿ ವರದಿ ಸಲ್ಲಿಸುವಂತೆ ಸೂಚಿಸಿದರು.

ಇದೇ ವೇಳೆ ಕಂಟೋನ್ಮೆಂಟ್ ರೈಲ್ವೆ ಕಾಲನಿಯಲ್ಲಿ 368 ವಿವಿಧ ಪ್ರಭೇದದ ಬೃಹತ್ ಮರಗಳು ಇವೆ. ಇವುಗಳನ್ನು ಸಂರಕ್ಷಿಸಿ ಜೀವವೈವಿಧ್ಯ ಪಾರಂಪರಿಕ ತಾಣವಾಗಿ ಘೋಷಿಸುವಂತೆ ಸ್ಥಳೀಯರು ಮತ್ತು ಪರಿಸರ ಪ್ರೇಮಿಗಳು ಮನವಿ ಸಲ್ಲಿಸಿದ್ದಾರೆ. ಈ ಬಗ್ಗೆ ಪ್ರಕ್ರಿಯೆ ಆರಂಭಿಸುವಂತೆ ಮತ್ತು ಅಲ್ಲಿಯವರೆಗೆ ಮರ ಕಡಿಯಲು ಅನುಮತಿ ನೀಡದಂತೆ ಅರಣ್ಯ ಸಚಿವರು ಸೂಚಿಸಿದರು.

ಇದನ್ನೂ ಓದಿ: Mangaluru: ಮಂಗಳೂರು: ಇಂದು ಕುದ್ರೋಳಿ ದೇವಸ್ಥಾನದಲ್ಲಿ ವಿಶ್ವ ಶಾಂತಿಗಾಗಿ ಶತಸೀಯಾಳಾಭಿಷೇಕ!

You may also like