Home » ರಾಜ್ಯ ಕ್ರೀಡೆ ಸ್ಥಾನ ಲಭಿಸಿದ ಹಿನ್ನೆಲೆ: ಶಿವಮೊಗ್ಗ, ಮೈಸೂರು, ಬೆಂಗಳೂರಿನಲ್ಲಿ ಕಂಬಳ ಆಯೋಜನೆ

ರಾಜ್ಯ ಕ್ರೀಡೆ ಸ್ಥಾನ ಲಭಿಸಿದ ಹಿನ್ನೆಲೆ: ಶಿವಮೊಗ್ಗ, ಮೈಸೂರು, ಬೆಂಗಳೂರಿನಲ್ಲಿ ಕಂಬಳ ಆಯೋಜನೆ

0 comments
Bengaluru Kambala

ಮಂಗಳೂರು: ಕಂಬಳಕ್ಕೆ ರಾಜ್ಯದ ಕ್ರೀಡೆ ಸ್ನಾನ ಲಭಿಸಿದ ಹಿನ್ನೆಲೆಯಲ್ಲಿ ಶಿವಮೊಗ್ಗ ಮೈಸೂರಿನಲ್ಲಿ ಕಂಬಳ ಆಯೋಜಿಸುವ ಪ್ರಸ್ತಾಪ ಮುನ್ನೆಲೆಗೆ ಬಂದಿದೆ. ಕರ್ನಾಟಕ ರಾಜ್ಯ ಕಂಬಳ ಸಂಸ್ಥೆಯ ಅಧ್ಯಕ್ಷ ದೇವಿ ಪ್ರಸಾದ್ ಶೆಟ್ಟಿ ಬೆಳಪು ಅವರು ರಾಜ್ಯದ ವಿವಿಧೆಡೆ ಕಂಬಳ ಆಯೋಜಿಸಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದ್ದಾರೆ.

ಜಿಲ್ಲಾ ಕಂಬಳ ಸಮಿತಿ ಮತ್ತು ರಾಜ್ಯ ಸಂಸ್ಥೆಯ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದೇವಿ ಪ್ರಸಾದ್ ಶೆಟ್ಟಿ ಅವರು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮೈಸೂರಿನಲ್ಲಿ ಕಂಬಳ ಆಯೋಜಿಸಲು ಮುಂದಾಗಿದ್ದಾರೆ. ಹೀಗಾಗಿ ಸಂಸ್ಥೆಯ ಪ್ರತಿನಿಧಿಗಳು ಮೈಸೂರಿಗೆ ತೆರಳಿ ಪರಿಶೀಲನೆ ನಡೆಸಿದ್ದು, ದಸರಾ ಸಂದರ್ಭದಲ್ಲಿ ಕಂಬಳ ಆಯೋಜಿಸುವ ಉದ್ದೇಶವಿದೆ ಎಂದು ಹೇಳಿದ್ದಾರೆ.

ಶಿವಮೊಗ್ಗ ಮತ್ತು ಬೆಂಗಳೂರಿನಲ್ಲಿ ಕೂಡ ಕಂಬಳ ಆಯೋಜನೆಗೆ ಅವಕಾಶ ಸಿಗುವ ಭರವಸೆ ಇದೆ. ಉತ್ತರ ಕನ್ನಡದಲ್ಲಿ ಕಂಬಳ ಆಯೋಜಿಸಲು ಸಚಿವ ಮಂಕಾಳ ವೈದ್ಯ ಉತ್ಸಾಹ ತೋರಿಸಿದ್ದಾರೆ. ಅಲ್ಲದೆ ಕಂಬಳದಲ್ಲಿ ತೊಡಗಿಸಿಕೊಂಡವರಿಗೆ ಕಾರ್ಮಿಕ ಕಾರ್ಡ್ ನೀಡುವುದಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆದಿದೆ ಎಂದು ಹೇಳಿದ್ದಾರೆ.

You may also like