4
Chikkaballapura: ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯನ್ನು ಭಾಗ್ಯನಗರ ಎಂದು ಮರುನಾಮಕರಣ ಮಾಡಲು ಸರ್ಕಾರ ತೀರ್ಮಾನ ಮಾಡಿದ್ದು, ನಾಳೆ ನಡೆಯಲಿರುವಂತಹ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನವಾಗಿ ಮಾಹಿತಿ ಹೊರಬೀಳಲಿದೆ.
ಆಂಧ್ರಪ್ರದೇಶ ಗಡಿಭಾಗಕ್ಕೆ ಹೊಂದಿಕೊಂಡಿದ್ದಂತಹ ಬಾಗಿಪಲ್ಲಿಯ ಹೆಸರನ್ನು ಬದಲಾಯಿಸಬೇಕು ಎಂಬ ಕೂಗು ಕೇಳಿ ಬಂದಿತ್ತು. ಪಲ್ಲಿ ಎಂದರೆ ತೆಲುಗು ಭಾಷೆಯಲ್ಲಿ ಹಳ್ಳಿ ಎಂದು ಅರ್ಥ, ಆದ್ದರಿಂದ ಈ ಹೆಸರನ್ನು ಬದಲಾಯಿಸಬೇಕು ಎಂಬ ಅಭಿಯಾನ ಶುರುವಾಗಿತ್ತು.
ಇನ್ನೂ ನಾಳೆ ನಂದಿ ಹಿಲ್ಸ್ ನಲ್ಲಿ ನಡೆಯಲಿರುವ ಸಂಪುಟ ಸಭೆಯಲ್ಲಿ ಈ ಕುರಿತಾಗಿ ಚರ್ಚೆ ಆಗಲಿದ್ದು, ಅಧಿಕೃತವಾಗಿ ಘೋಷಣೆಯಾಗಲಿದೆ.
