Home » Rape Case: ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ – ಭಜರಂಗದಳದ ಮುಖಂಡ ಅರೆಸ್ಟ್ !!

Rape Case: ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ – ಭಜರಂಗದಳದ ಮುಖಂಡ ಅರೆಸ್ಟ್ !!

0 comments

Rape Case: ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಜರಂಗದಳದ ನಾಯಕ ದಿಲೀಪ್ ಸಿಂಗ್ ಬಜರಂಗಿ ಅವರನ್ನು ಬಂಧಿಸಲಾಗಿದೆ.

ಯಸ್, ನವೆಂಬರ್ 5, 2024 ರಂದು, ಭಜರಂಗಿ ತನ್ನೊಂದಿಗೆ ಸ್ನೇಹ ಬೆಳೆಸಿ, ಘಂಟಾಘರ್‌ನ ಹೋಟೆಲ್‌ಗೆ ಕರೆದೊಯ್ದು ಮದುವೆಯ ನೆಪದಲ್ಲಿ ತನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಿ ಮಹಿಳೆಯೊಬ್ಬರು ಕಲೆಕ್ಟರ್‌ಗಂಜ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದರು. ಅಲ್ಲದೆ ಬಜರಂಗಿ ಅಶ್ಲೀಲ ವೀಡಿಯೋಗಳನ್ನು ಕೂಡ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾರೆ ಎಂದು ಮಹಿಳೆ ಹೇಳಿಕೊಂಡಿದ್ದರು. ಇದರ ಬೆನ್ನಲ್ಲೇ ಪ್ರಕರಣದ ತನಿಖೆ ಆರಂಭಿಸಲಾಗಿತ್ತು. ಆದರೆ, ಕಾನ್ಪುರದ ಬಜರಂಗದಳದ ಮಾಜಿ ಜಿಲ್ಲಾ ಸಂಚಾಲಕರಾಗಿದ್ದ ಬಜರಂಗಿ ಅವರು ತಲೆಮರೆಸಿಕೊಂಡಿದ್ದಾರೆ ಎಂದು ತಿಳಿಸಲಾಗಿತ್ತು.

ಆದರೀಗ ಸುಳ್ಳು ಅತ್ಯಾಚಾರ ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದು ಆರೋಪಿಸಿ ಸೋಮವಾರ ಗೋವಿಂದ್ ನಗರ ಪೊಲೀಸ್ ಠಾಣೆಯ ಹೊರಗೆ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನಂತರ ದಿಲೀಪ್ ಸಿಂಗ್ ಬಜರಂಗಿಯನ್ನು ಬಂಧಿಸಲಾಗಿದೆ ಎಂದು ಹೆಚ್ಚುವರಿ ಡಿಸಿಪಿ (ದಕ್ಷಿಣ) ಮಹೇಶ್ ಕುಮಾರ್ ತಿಳಿಸಿದ್ದಾರೆ.

You may also like