Home » Bakrabail: ಬೈಕ್‌ನಲ್ಲಿ ತೆರಳುತ್ತಿದ್ದ ಅಡಿಕೆ ವ್ಯಾಪಾರಿಗೆ ಗುಂಡೇಟು!

Bakrabail: ಬೈಕ್‌ನಲ್ಲಿ ತೆರಳುತ್ತಿದ್ದ ಅಡಿಕೆ ವ್ಯಾಪಾರಿಗೆ ಗುಂಡೇಟು!

0 comments

Ullala: ಬೈಕ್‌ನಲ್ಲಿ ತೆರಳುತ್ತಿದ್ದ ಅಡಿಕೆ ವ್ಯಾಪಾರಿಗೆ ಗುಂಡೇಟು ಬಿದ್ದಿರುವ ಘಟನೆ ಕರ್ನಾಟಕ-ಕೇರಳ ಗಡಿಭಾಗ ಬಾಕ್ರಬೈಲ್‌ ತಿರುವಿನಲ್ಲಿ ಭಾನುವಾರ ರಾತ್ರಿ ನಡೆದಿರುವ ಕುರಿತು ವರದಿಯಾಗಿದೆ. ಬಾಕ್ರಬೈಲ್‌ ನಡೀಬೈಲು ನಿವಾಸಿ ಸವಾದ್‌ (22) ಗುಂಡು ತಾಗಿರುವ ಯುವಕ.

ಬಾಕ್ರಬೈಲ್‌ ತಿರುವಿನ ಸೂರ್ಯೇಶ್ವರ ದ್ವಾರದ ಬಳಿ ಈ ಘಟನೆ ನಡೆದಿದೆ. ನಿನ್ನೆ ರಾತ್ರಿ ಬೈಕ್‌ನಲ್ಲಿ ಮನೆ ಕಡೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿರುವ ಕುರಿತು ವರದಿಯಾಗಿದೆ. ಗಾಯಾಳುವಿಗೆ ಕಾಲಿಗೆ ಗಂಭೀರ ಗಾಯವಾಗಿದೆ. ಕೂಡಲೇ ಸವಾದ್‌ನನ್ನು ದೇರಳಕಟ್ಟೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಬೈಕ್‌ನಲ್ಲಿ ತೆರಳುವ ಸಂದರ್ಭ ನಿರ್ಜನ ಗುಡ್ಡದಲ್ಲಿ ವಾಹನದ ಹೆಡ್ಲೈಟ್‌ ಕಾಣಿಸಿದರ ಪರಿಣಾಮ ಸವಾದ್‌ ಇದನ್ನು ಗಮನಿಸಿ ಬೈಕ್‌ ನಿಲ್ಲಿಸಿದ್ದು, ಶೂಟೌಟ್‌ ನಡೆದಿದೆ ಎನ್ನುವ ಮಾತುಗಳು ಕೇಳಿ ಬರುತ್ತಿದೆ. ಪ್ರಾಣಿ ಬೇಟೆಗೆ ಬಂದವರು ತಪ್ಪಿ ಗುಂಡು ಹಾರಿಸಿರುವ ಸಾಧ್ಯತೆ ಇದೆ ಎಂದು ಮಾಜಿ ಸದಸ್ಯ ಹರ್ಷಾದ್‌ ವರ್ಕಾರಿ ಹೇಳಿದ್ದಾರೆ ಎಂದು ವರದಿಯಾಗಿದೆ.

ಬಾಕ್ರಬೈಲ್‌ ಪ್ರದೇಶ ಕೇರಳಕ್ಕೆ ಸೇರಿದ್ದು, ಮಂಜೇಶ್ವರ ಠಾಣಾ ಪೊಲೀಸರು ಘಟನಾ ಸ್ಥಳದಲ್ಲಿದ್ದು, ತನಿಖೆ ಮಾಡುತ್ತಿದ್ದಾರೆ.

You may also like