Bengaluru Traffic: ಬೆಂಗಳೂರಿನ ಸಂಚಾರ ದಟ್ಟಣೆ ತಪ್ಪಿಸಲು ನಮ್ಮ ಸರ್ಕಾರ ಮುಂದಡಿಯಿಟ್ಟಿದೆ. ಎಸ್ಟೀಮ್ ಮಾಲ್ ನಿಂದ ಬ್ಯಾಪ್ಟಿಸ್ಟ್ ಆಸ್ಪತ್ರೆವರೆಗೆ 1.5 ಕಿಲೋ ಮೀಟರ್ ಉದ್ದದ ನೂತನ ಟನಲ್ ರಸ್ತೆ ನಿರ್ಮಿಸಲಾಗುವುದು. ಇದರ ಸಾಧಕ-ಬಾಧಕ ಹಾಗೂ ಹಣಕಾಸಿನ ನೆರವಿನ ಬಗ್ಗೆ ಮುಖ್ಯಮಂತ್ರಿಗಳ ಬಳಿ ಚರ್ಚೆ ನಡೆಸಲಾಗಿದೆ ಎಂದು ಉಪಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆ.ಆರ್.ಪುರಂ ಕಡೆಯಿಂದ ಮೇದ್ರಿ ಸರ್ಕಲ್ ಭಾಗದ ಲೂಪ್ ಅನ್ನು 30 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ. ಇನ್ನೊಂದು ಭಾಗದ ಲೂಪ್ ಅನ್ನು ನವೆಂಬರ್ ಹೊತ್ತಿಗೆ ಪೂರ್ಣಗೊಳಿಸಲಾಗುವುದು, ಒಟ್ಟು 300 ಕೋಟಿ ರೂ. ವೆಚ್ಚದಲ್ಲಿ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಎರಡು ಪಥಗಳು ಇರುವೆಡೆ ಆರು ಪಥಗಳು ಬರುವಂತೆ ಯೋಜನೆ ರೂಪಿಸಲಾಗಿದೆ ಎಂದರು.
17,000 ಕೋಟಿ ರೂ. ವೆಚ್ಚದಲ್ಲಿ 16.5 ಕಿಲೋಮೀಟರ್ ಉದ್ದದ ಟನಲ್ ರಸ್ತೆಗೆ ಟೆಂಡರ್ ಕರೆಯಲಾಗಿದೆ. ಹೆಬ್ಬಾಳ ಜಂಕ್ಷನ್ ಮತ್ತೊಂದು ಲೂಪ್ ನಿರ್ಮಾಣ ತ್ವರಿತಗೊಳಿಸಲು ಬಿಡಿಎ ಅಧ್ಯಕ್ಷ ಹ್ಯಾರಿಸ್ ಅವರು ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ವಿಮಾನ ನಿಲ್ದಾಣದಿಂದ ಬರುವವರೂ ಸೇರಿದಂತೆ ಎಲ್ಲರೂ ಸಂಚಾರ ದಟ್ಟಣೆ ಅನುಭವಿಸುತ್ತಿದ್ದರು. ಇದನ್ನು ತಪ್ಪಿಸಲು ಸರ್ಕಾರ ಬದ್ಧವಾಗಿದೆ. ಹೆಬ್ಬಾಳ ಜಂಕ್ಷನ್‌ನಿಂದ ಸಿಲ್ಕ್ ಬೋರ್ಡ್ ಜಂಕ್ಷನ್ ವರೆಗೆ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಏನೇನು ಕ್ರಮ ತೆಗೆದುಕೊಳ್ಳಲಾಗಿದೆ ಎಂಬ ಕುರಿತು ಮುಖ್ಯಮಂತ್ರಿಗಳಿಗೆ ವಿವರಣೆ ನೀಡಿದ್ದೇನೆ ಎಂದರು.
ತುಂಬಾ ಪಾರದರ್ಶಕವಾಗಿದ್ದೇನೆ. ನನಗೆ ಕೆಲಸ ಮುಖ್ಯವೇ ಹೊರತು ಹಣವಲ್ಲ. ಯುವ ಸಂಸದರೊಬ್ಬರು ಹಣಕ್ಕಾಗಿ ಕೆಲಸ ಮಾಡುತ್ತಿದ್ದೇವೆ ಎಂದಿದ್ದಾರೆ. ನಮಗೆ ಹಣದ ಅಗತ್ಯವಿಲ್ಲ. ಬಿಜೆಪಿ ಅಧಿ ಕಾಲಾವಧಿಯಲ್ಲಿ ಒಂದೇ ಒಂದು ಸಣ್ಣ ಕೆಲಸವನ್ನೂ ಮಾಡಿಲ್ಲ. ಕೇಂದ್ರ ಸರ್ಕಾರ ದಿಂದ ಒಂದೇ ಒಂದು ರೂಪಾಯಿ ತರದಿರುವುದು ನಾಚಿಕೆಗೇಡಿನ ಸಂಗತಿ. ಬೆಂಗಳೂರು ಜಾಗತಿಕ ನಗರ, ಪ್ರಧಾನಿ ನರೇಂದ್ರ ಮೋದಿ ಸಹ ಒಪ್ಪಿಕೊಂಡಿದ್ದಾರೆ. ನೂತನ ಮೇಲ್ಸೇತುವೆಯಿಂದ ಮೇಕ್ರಿ ಸರ್ಕಲ್ ಬಳಿ ಸಂಚಾರ ದಟ್ಟಣೆ ಹೆಚ್ಚಲಿದೆ ಎನ್ನುವ ಟೀಕೆಗೆ ಉತ್ತರ ನೀಡಲು ಆಗುವುದಿಲ್ಲ ಎಂದು ಹೇಳಿದರು.
Udupi: ಬಿ.ಎಲ್. ಸಂತೋಷ್ ವಬಗ್ಗೆ ಅವಹೇಳನ- ಮಹೇಶ್ ಶೆಟ್ಟಿ ವಿರುದ್ಧ FIR ದಾಖಲು!!
