Bangalore: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸ್ ಆಯುಕ್ತ ದಯಾನಂದ್ ಅವರನ್ನು ಅಮಾನತು ಮಾಡಲಾಗಿದ್ದು, ನೂತನ ಪೊಲೀಸ್ ಆಯುಕ್ತರಾಗಿ ಕರ್ನಾಟಕ ಐಪಿಎಸ್ ಅಧಿಕಾರಿ ಸೀಮಂತ್ ಕುಮಾರ್ ಸಿಂಗ್ ಅಧಿಕಾರ ಸ್ವೀಕಾರ ಮಾಡಿದ್ದಾರೆ.
ನೂತನ ಪೊಲೀಸ್ ಆಯುಕ್ತರಿಗೆ ಬ್ಯಾಟನ್ ಹಸ್ತಾಂತರ ಮಾಡಿಲ್ಲ. ದಯಾನಂದ್ ಅಮಾನತು ಹಿನ್ನೆಲೆ ಬ್ಯಾಟನ್ ಹಸ್ತಾಂತರಿಸಿಲ್ಲ. ಕಡತಕ್ಕೆ ಸಹಿ ಹಾಕಿ ನೂತನ ಆಯುಕ್ತರು ಅಧಿಕಾರ ಸ್ವೀಕರಿಸಿದ್ದಾರೆ.
ನೂತನ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ಮುಖ್ಯಮಂತ್ರಿ ಸೂಚನೆಯ ಮೇರೆಗೆ ಅಧಿಕಾರ ಸ್ವೀಕರಿಸಿದ್ದೇನೆ ಎಂದು ಹೇಳಿದ್ದಾರೆ. ಪೊಲೀಸ್ ಇಲಾಖೆಯ ಸಿಬ್ಬಂದಿ ಒಳ್ಳೆಯ ಕೆಲಸ ಮಾಡಿದ್ದು, ಈಗಷ್ಟೇ ಅಧಿಕಾರ ಸ್ವೀಕರಿಸಿದ್ದು, ನಿಮ್ಮೆಲ್ಲರ ಸಹಕಾರ ಬೇಕು ಎಂದು ತಿಳಿಸಿದ್ದಾರೆ.
ರಾಜಧಾನಿ ಬೆಂಗಳೂರಿಗೆ 39 ನೇ ಪೊಲೀಸ್ ಕಮಿಷನರ್ ಆಗಿ ಬಿಹಾರ ಮೂಲದ ಎಡಿಜಿಪಿ ಸೀಮಂತ್ ಕುಮಾರ್ ಸಿಂಗ್ ಅವರನ್ನು ರಾಜ್ಯ ಸರಕಾರ ಆದೇಶ ಹೊರಡಿಸಿದ್ದು, ಈ ಹಿನ್ನಲೆ ಗುರುವಾರ ತಡರಾತ್ರಿಯೇ ಅಧಿಕಾರ ಸ್ವೀಕರಿಸಿದ್ದಾರೆ.
ಅಮಾನತುಗೊಂಡಿರುವ ಬಿ.ದಯಾನಂದ ನಗರ ಪೊಲೀಸ್ ಆಯುಕ್ತರಾಗಿ ಶೀಘ್ರದಲ್ಲೇ 2 ವರ್ಷ ಪೂರೈಸಲಿದ್ದರು. ಅಮಾನತುಗೊಂಡ ಕಾರ ಅವರ ಮುಂಡ್ತಿಗೆ ಇದು ಅಡ್ಡಿ ಉಂಟು ಮಾಡಿದೆ. ಶೀಘ್ರದಲ್ಲೇ ಡಿಜಿಪಿ ಹುದ್ದೆಗೆ ಮುಂಬಡ್ತಿ ಪಡೆಯಲಿದ್ದರು. ಕಾಲ್ತುಳಿತ ಪ್ರಕರಣ ಸಂಬಂಧ ದಯಾನಂದ ಅವರ ತಲೆದಂಡವಾಗಿದೆ.
ಡಿಸಿಆರ್‌ಇ ಎಡಿಜಿಪಿ ಅರುಣ್ ಚಕ್ರವರ್ತಿ, ಸಿಐಡಿ ಎಡಿಜಿಪಿ ಬಿ.ಕೆ.ಸಿಂಗ್ ಹಾಗೂ ಅಗ್ನಿಶಾಮಕ ಇಲಾಖೆ ಎಡಿಜಿಪಿ ಎಂ.ನಂಜುಂಡಸ್ವಾಮಿ ಸೇರಿದಂತೆ ಕೆಲ ಹಿರಿಯ ಐಪಿಎಸ್ ಅಧಿಕಾರಿಗಳು ನಗರ ಪೊಲೀಸ್ ಆಯುಕ್ತರ ಹುದ್ದೆಯ ರೇಸ್‌ನಲ್ಲಿದ್ದರು. ಅಚ್ಚರಿಯ ಬೆಳವಣಿಗೆಯಲ್ಲಿ ರಾಜ್ಯ ಸರ್ಕಾರ ಸೀಮಂತ್ ಕುಮಾರ್ ಸಿಂಗ್ ಅವರನ್ನು ನಗರ ಪೊಲೀಸ್ ಆಯುಕ್ತರನ್ನಾಗಿ ನೇಮಿಸಿದೆ
