Bangalore Stampede: ಪ್ರಧಾನಿ ನರೇಂದ್ರ ಮೋದಿ ಕೂಡ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತದ ಬಗ್ಗೆ ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದಾರೆ.
ನಿನ್ನೆ ನಡೆದ ಐಪಿಎಲ್ ಪಂದ್ಯದಲ್ಲಿ ಗೆದ್ದ ಆರ್‌ಸಿಬಿ ತಂಡಕ್ಕೆ ಪ್ರಧಾನಿ ಮೋದಿ ಸಂತಸ ವ್ಯಕ್ತ ಪಡಿಸಿದ್ರೆ, ಇಂದು ಬೆಂಗಳೂರಿನಲ್ಲಿ ಆರ್‌ಸಿಬಿ ವಿಜಯೋತ್ಸವದ ವೇಳೆ ನಡೆದ ಭೀಕರ ಕಾಲ್ತುಳಿತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
ಬೆಂಗಳೂರಿನಲ್ಲಿ ನಡೆದ ದುರ್ಘಟನೆ ನಿಜಕ್ಕೂ ಹೃದಯವಿದ್ರಾವಕ. ಈ ದುರಂತದ ಸಮಯದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲರೊಂದಿಗೆ ನಾವಿದ್ದೇವೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಕಚೇರಿ ಎಕ್ಸ್ನಲ್ಲಿ ಸಂತಾಪ ಸೂಚಿಸಿದೆ.

ಈ ದುಃಖದ ಕ್ಷಣದಲ್ಲಿ ತಮ್ಮ ಪ್ರಿಯಜನರನ್ನು ಕಳೆದುಕೊಂಡ ಎಲ್ಲರೊಂದಿಗೆ ನನ್ನ ಸಹಾನುಭೂತಿ ಇದೆ. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ’ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬರೋಬ್ಬರಿ 18 ವರ್ಷಗಳ ಬಳಿಕ ಐಪಿಎಲ್ ಟ್ರೋಫಿ ಗೆದ್ದು ಕೋಟ್ಯಾಂತರ ಆರ್‌ಸಿಬಿ ಅಭಿಮಾನಿಗಳ ಕನಸನ್ನು ಈಡೇರಿಸಿದೆ. ಸದ್ಯ ಈ ಖುಷಿಪಡುವ ಸಮಯದಲ್ಲೇ ದುರಂತ ಒಂದು ನಡೆದು ಹೋಗಿದೆ.
