Bangalore Stampede: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ರಾಯಲ್ ಚಾಲೆಂಜರ್ಸ್ ಸಂಭ್ರಮಾಚರಣೆಯಲ್ಲಿ ಸಂಭವಿಸಿದ ಕಾಲ್ತುಳಿದ ಘಟನೆಗೆ ಸಂಬಂಧಪಟ್ಟಂತೆ ಮೃತಪಟ್ಟವರ ಸಂಖ್ಯೆ 13 ಕ್ಕೆ ಏರಿದೆ. 25 ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದು, ಕೆಲವರಿಗೆ ಕಾಲು ಮುರಿದಿದ್ದು, ಮತ್ತೆ ಕೆಲವರು ಉಸಿರಾಟದ ಸಮಸ್ಯೆಯಿಂದ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇದೀಗ ನಟಿ ರಮ್ಯಾ ದಿವ್ಯ ಸ್ಪಂದನಾ ಅವರು ಸೋಶಿಯಲ್ ಮೀಡಿಯಾ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.
‘ಇಂದು ಆರ್ಸಿಬಿ ಸೆಲೆಬ್ರೇಷನ್ ಸಂದರ್ಭದಲ್ಲಿ ಪ್ರಾಣ ಕಳೆದುಕೊಂಡವರಿಗಾಗಿ ನನ್ನ ಹೃದಯ ಮಿಡಿಯುತ್ತಿದೆ. ಇದು ಹೃದಯ ವಿದ್ರಾವಕ ಘಟನೆ’ ಎಂದು ರಮ್ಯಾ ಅವರು ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಪೋಸ್ಟ್ ಮಾಡಿದ್ದಾರೆ.
ರಾಜ್ಯ ಸರಕಾರ ಸಂಭ್ರಮಾಚರಣೆಗೆ ಸರಿಯಾದ ತಯಾರಿ ಹಮ್ಮಿಕೊಂಡಿದ್ದರಿಂದ ಈ ದುರಂತ ಸಂಭವಿಸಿದೆ ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ.
ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಹೋಗಲು ಬಯಸಿರುವವರು ಎಚ್ಚರಿಕೆಯಿಂದಿರಿ. ನಾನು ಕೂಡ ಅಲ್ಲಿಗೆ ಹೋಗಿದ್ದೆ. ಅನುಮತಿ ಇದ್ದರೂ ಕೂಡ ನಾವು ಕ್ರೀಡಾಂಗಣದ ಒಳಗೆ ಹೋಗಲು ಸಾಧ್ಯವಾಗಲಿಲ್ಲ. ನಮ್ಮೆಲ್ಲರಿಗಾಗಿ ಪೊಲೀಸರು ಕಷ್ಟಪಡುತ್ತಿದ್ದಾರೆ. ಅವರಿಗೆ ಸಹಕರಿಸಿ’ ಎಂದು ಸಪ್ತಮಿ ಗೌಡ ಪೋಸ್ಟ್ ಮಾಡಿದ್ದಾರೆ.
‘ನಮ್ಮ ತಂಡದ ಐತಿಹಾಸಿಕ ಗೆಲುವನ್ನು ಸಂಭ್ರಮಿಸಲು ನಾವು ಪ್ರಯತ್ನಿಸಿದೆವು. ಆದರೆ ಪರಿಸ್ಥಿತಿ ಅರ್ಥ ಮಾಡಿಕೊಳ್ಳಬೇಕಿದೆ. ಸ್ಟೇಡಿಯಂ ಹೊರಗಿನ ವಾತಾವರಣ ಭಯ ಬೀಳಿಸುವಂತಿದೆ. ಸ್ಟೇಡಿಯಂನಿಂದ ದೂರ ಇದ್ದು ಕೂಡ ನೀವು ಸೆಲೆಬ್ರೇಟ್ ಮಾಡಬಹುದು. ಮನೆಯಲ್ಲಿ ಇದ್ದು ಎಂಜಾಯ್ ಮಾಡಿ. ಸುರಕ್ಷಿತವಾಗಿ ಮನೆಗೆ ಹೋಗಿ’ ಎಂದು ಸಪ್ತಮಿ ಗೌಡ ಅವರು ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ.
