Home » Bantwala: ಬಂಟ್ವಾಳ: ನದಿಯಲ್ಲಿ ತೇಲಿಬಂದ ಮಹಿಳೆಯ ಮೃತದೇಹ!

Bantwala: ಬಂಟ್ವಾಳ: ನದಿಯಲ್ಲಿ ತೇಲಿಬಂದ ಮಹಿಳೆಯ ಮೃತದೇಹ!

0 comments

Bantwala: ಅಪರಿಚಿತ ಮಹಿಳೆಯೊಬ್ಬರ ಮೃತದೇಹ ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ನೇತ್ರಾವತಿ ನದಿಯಲ್ಲಿ ಬುಧವಾರ ಬೆಳಗ್ಗೆ ಪತ್ತೆಯಾಗಿದೆ.

ನದಿಯಲ್ಲಿ ತೇಲುತ್ತಿದ್ದ ಮೃತದೇಹವನ್ನು ಸ್ಥಳೀಯರು ಮೇಲಕ್ಕೆತ್ತಿದ್ದಾರೆ. ಮೃತ ಮಹಿಳೆಗೆ ಸುಮಾರು 60 ವರ್ಷ ಪ್ರಾಯವಾಗಿರಬಹುದು ಎಂದು ಅಂದಾಜಿಸಲಾಗಿದೆ. ಮೃತದೇಹವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.ವಾರಸುದಾರರಿದ್ದಲ್ಲಿ ಬಂಟ್ವಾಳ ನಗರ ಠಾಣೆಯನ್ನು ಸಂಪರ್ಕಿಸುವಂತೆ ಠಾಣಾಧಿಕಾರಿ ಸಂದೀಪ್ ಶೆಟ್ಟಿ ತಿಳಿಸಿದ್ದಾರೆ.

You may also like