Home » ಭಾನುವಾರದವರೆಗೆ ಮದ್ಯ ಮಾರಾಟ ಸಂಪೂರ್ಣ ನಿಷೇಧ, ಅಘೋಷಿತ ಬಂದ್ ಸ್ಥಿತಿ ನಿರ್ಮಾಣ

ಭಾನುವಾರದವರೆಗೆ ಮದ್ಯ ಮಾರಾಟ ಸಂಪೂರ್ಣ ನಿಷೇಧ, ಅಘೋಷಿತ ಬಂದ್ ಸ್ಥಿತಿ ನಿರ್ಮಾಣ

by Praveen Chennavara
0 comments

ಬೆಂಗಳೂರು : ಇಡೀ ಕರ್ನಾಟಕ ಇವತ್ತು ತಲ್ಲಣ. ಇಂದು ಅ.29 ರ ಶುಕ್ರವಾರ ಮಧ್ಯಾಹ್ನ ‌ನಿಧನರಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆ ಭಾನುವಾರ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿದೆ.

ಪುನೀತ್ ಅವರ ನಿಧನ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರಿನಲ್ಲಿ ಇಂದು ಸಂಜೆಯಿಂದ ಭಾನುವಾರದವರೆಗೆ ಬಾರ್ ಹಾಗೂ ಮದ್ಯದಂಗಡಿಗಳನ್ನು ಮುಚ್ಚಲು ಬಿಬಿಎಂಪಿ ಸೂಚಿಸಿದೆ.

ಈ ಮಧ್ಯೆ, ಉನ್ನತ ವ್ಯಾಸಾಂಗಕ್ಕಾಗಿ ಅಮೇರಿಕಾದಲ್ಲಿರುವ ಪುನೀತ್ ಅವರ ಮಗಳು ದೃತಿ ಅಮೆರಿಕದಿಂದ ಮರಳುತ್ತಿದ್ದು, ಶನಿವಾರ ಬೆಂಗಳೂರು ತಲುಪುವ ಸಾಧ್ಯತೆಯಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಶುಕ್ರವಾರ ಸಂಜೆ 5 ಗಂಟೆಯಿಂದ ಕಂಠೀರವ ಕ್ರೀಡಾಂಗಣದಲ್ಲಿ ಅಭಿಮಾನಿಗಳಿಗೆ ಅಂತಿಮ ದರ್ಶನಕ್ಕಾಗಿ ವ್ಯವಸ್ಥೆ ಮಾಡಲಾಗಿದೆ.

ಪುನೀತ್ ಅವರ ಪಾರ್ಥಿವ ಶರೀರವನ್ನು ವಿಕ್ರಂ ಆಸ್ಪತ್ರೆಯಿಂದ ಅವರ ಸದಾಶಿವನಗರ ನಿವಾಸಕ್ಕೆ ತರಲಾಗಿದೆ. ಅವರ ನಿವಾಸದ ಸುತ್ತ ಹಾಗೂ ಕಂಠೀರವ ಸ್ಟುಡಿಯೋ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಶಾಲಾ ಕಾಲೇಜುಗಳಿಗೆ ಬೆಂಗಳೂರಿನಲ್ಲಿ ನಾಳೆ ರಜೆ ಘೋಷಿಸಲಾಗಿದೆ.

You may also like

Leave a Comment