Home » ಟ್ರಾಫಿಕ್‌ ನಿಯಮ ಉಲ್ಲಂಘಿಸುವ ಮೊದಲು ಇರಲಿ ಎಚ್ಚರಿಕೆ, ಇನ್ಮುಂದೆ ಬೀಳುತ್ತೆ FIR

ಟ್ರಾಫಿಕ್‌ ನಿಯಮ ಉಲ್ಲಂಘಿಸುವ ಮೊದಲು ಇರಲಿ ಎಚ್ಚರಿಕೆ, ಇನ್ಮುಂದೆ ಬೀಳುತ್ತೆ FIR

0 comments
Traffic Rules

ಬೆಂಗಳೂರು: ಇನ್ನು ಮುಂದೆ ಸಂಚಾರ ನಿಯಮಗಳ ಪಾಲನೆ ಮಾಡದಿದ್ದರೆ ದಂಡ ಒಂದೇ ಬೀಳುವುದಲ್ಲ, ಕೇಸು ಕೂಡಾ ದಾಖಲಾಗುತ್ತದೆ. ಟ್ರಾಫಿಕ್‌ ರೂಲ್ಸ್‌ ಬ್ರೇಕ್‌ ಮಾಡುವವರ ವಿರುದ್ಧ ಬೆಂಗಳೂರಿನಲ್ಲಿ ಪೊಲೀಸರು ಈಗಾಗಲೇ ಎಫ್‌ಐಆರ್‌ ದಾಖಲು ಮಾಡಲು ಪ್ರಾರಂಭ ಮಾಡಿದ್ದಾರೆ.

ಸಿಗ್ನಲ್‌ ಜಂಪ್‌ ಮಾಡುವುದು, ಏಕಮಾರ್ಗ ರಸ್ತೆಯಲ್ಲಿ ವಿರುದ್ಧ ದಿಕ್ಕಿನಲ್ಲಿ ವಾಹನ ಚಲಾಯಿಸುವುದು, ರಸ್ತೆಗಳ ಮೇಲೆ ವಾಹನ ನಿಲ್ಲಿಸಿ ಸಂಚಾರಕ್ಕೆ ಅಡಚಣೆ ಉಂಟು ಮಾಡುವುದು ಪ್ರಕರಣಗಳಿಗೆ ಸಂಬಂಧಿಸಿ ಆಯಾ ಪ್ರದೇಶಗಳ ವ್ಯಾಪ್ತಿಯ ಸಂಚಾರ ಪೊಲೀಸ್‌ ಠಾಣೆಗಳಲ್ಲಿ ಎಫ್‌ಐಆರ್‌ಗಳನ್ನು ದಾಖಲಿಸಲಾಗುತ್ತದೆ. ಈ ಕುರಿತು ಪಶ್ಚಿಮ ವಿಭಾಗದ ಉಪ ಪೊಲೀಸ್‌ ಆಯುಕ್ತ (ಡಿಸಿಪಿ) ಅನೂಪ್‌ ಶೆಟ್ಟಿ ಮಾಹಿತಿ ನೀಡಿರುವುದಾಗಿ ವರದಿಯಾಗಿದೆ.

You may also like