Home » Beer Price Hike: ಮದ್ಯಪ್ರಿಯರಿಗೆ ಮತ್ತೆ ಶಾಕ್- ಒಂದು ಬಿಯರ್‌ ಗೆ 30ರೂ ಹೆಚ್ಚಳ ಸಾಧ್ಯತೆ !!

Beer Price Hike: ಮದ್ಯಪ್ರಿಯರಿಗೆ ಮತ್ತೆ ಶಾಕ್- ಒಂದು ಬಿಯರ್‌ ಗೆ 30ರೂ ಹೆಚ್ಚಳ ಸಾಧ್ಯತೆ !!

0 comments
Beer Price Hike

Beer Prices Hike: ರಾಜ್ಯ ಸರ್ಕಾರ ಮದ್ಯ ಪ್ರಿಯರಿಗೆ ಮೇಲೆ ಮೇಲೆ ಶಾಕ್ ನೀಡುತ್ತಲೇ ಇದೆ. ಇದೀಗ ಮತ್ತೆ ಶಾಕ್ ಎದುರಾಗಿದ್ದು ರಾಜ್ಯದಲ್ಲಿ ಬಿಯರ್ ಬೆಲೆ ಶೀಘ್ರದಲ್ಲೇ ಪ್ರತಿ ಬಾಟಲಿಗೆ ಸುಮಾರು 10 ರಿಂದ 30 ರೂ.ಗಳಷ್ಟು ಹೆಚ್ಚಾಗುವ(Beer Price Hike)ನಿರೀಕ್ಷೆ ಇದೆ .

ಕರ್ನಾಟಕದಲ್ಲಿ ಉದ್ದೇಶಿತ ಮದ್ಯದ ಬೆಲೆ ಪರಿಷ್ಕರಣೆಯು ಭಾರತೀಯ ನಿರ್ಮಿತ ಮದ್ಯ ಮಾರಾಟ ಮತ್ತು ಅಬಕಾರಿ ಆದಾಯವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದ್ದು, ಸಿದ್ದರಾಮಯ್ಯ ಸರ್ಕಾರವು ಬಿಯರ್ ಬೆಲೆಯನ್ನು ಹೆಚ್ಚಿಸಲು ಮತ್ತು ಪ್ರೀಮಿಯಂ ಮದ್ಯದ ಬೆಲೆಯನ್ನು ಕಡಿಮೆ ಮಾಡಲು ಸಜ್ಜಾಗಿದೆ.

ಹೌದು, ವರದಿಯ ಪ್ರಕಾರ, ಬಿಯರ್ ಬೆಲೆಗಳು ಪ್ರತಿ ಬಾಟಲಿಗೆ 10 ರಿಂದ 30 ರಷ್ಟು ಹೆಚ್ಚಾಗುತ್ತವೆ, ಆದರೆ ರಾಜ್ಯ ಸರ್ಕಾರವು ಪ್ರೀಮಿಯಂ ಮದ್ಯದ ಬೆಲೆಯನ್ನು ಶೇಕಡಾ 20 ರಷ್ಟು ಕಡಿಮೆ ಮಾಡಬಹುದು. ಭಾರತೀಯ ನಿರ್ಮಿತ ಮದ್ಯ ಮಾರಾಟ ಮತ್ತು ಅಬಕಾರಿ ಆದಾಯವನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಪರಿಷ್ಕರಣೆಯನ್ನು ಪ್ರಸ್ತಾಪಿಸಿದೆ ಎಂದು ತಿಳಿದುಬಂದಿದೆ.

ಅಂದಹಾಗೆ ಕಳೆದ ಒಂದೂವರೆ ವರ್ಷದಲ್ಲಿ ಬಿಯರ್ ಬೆಲೆಯು ನಾಲ್ಕು ಬಾರಿ ಹೆಚ್ಚಳವಾಗಿದ್ದು, ಇದೀಗ ಮತ್ತೆ ಏರಿಕೆಯಾಗಲಿದೆ. ಮಾರುಕಟ್ಟೆಯಲ್ಲಿ ದಿನೇದಿನೆ ಬಿಯರ್‌ಗೆ ಬೇಡಿಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಾರುಕಟ್ಟೆಯಲ್ಲಿ ನಿಯಂತ್ರಿಸುವ ಉದ್ದೇಶದಿಂದ ಈ ಕ್ರಮಕ್ಕೆ ಅಬಕಾರಿ ಇಲಾಖೆ ಮುಂದಾಗಿದೆ.

You may also like

Leave a Comment