6
ಬಳ್ಳಾರಿ: ಬ್ಯಾನರ್ ವಿಷಯಕ್ಕೆ ಸಂಬಂಧಪಟ್ಟಂತೆ ನಡೆದ ಗಲಾಟೆಯಲ್ಲಿ ಓರ್ವ ಯುವ ಮೃತಪಟ್ಟ ವಿಚಾರಕ್ಕೆ ಸಂಬಂಧಪಟ್ಟಂತೆ ಶಾಸಕ ಭರತ್ ರೆಡ್ಡಿ ಸೇರಿ ಹಲವರ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ. ಈ ಘಟನೆ ಸಂಬಂಧ ಬಳ್ಳಾರಿಯ ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ, ಚಾನಾಳ್ ಶೇಖರ್, ನಾರಾ ಪ್ರತಾಪ್ ರೆಡ್ಡಿ, ನಾರಾ ಸೂರ್ಯನಾರಾಯಣರೆಡ್ಡಿ ಸೇರಿ ಹಲವರ ಹೆಸರನ್ನು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ. ಶಾಸಕ ಜನಾರ್ದನರೆಡ್ಡಿ, ಬಿಜೆಪಿ ಕಾರ್ಯಕರ್ತ ನಾಗರಾಜ್ ನೀಡಿದ್ದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲು ಮಾಡಲಾಗಿದೆ.
