Home » ಬೆಳ್ತಂಗಡಿ | ಸಿರಿಯನ್ ಕಥೊಲಿಕ್ ವಿವಿಧೋದ್ದೇಶ ಕಾರ್ಯನಿರ್ವಹಣಾಧಿಕಾರಿ ಜೋಸೆಫ್ ಪಿ.ಜೆ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ | ಸಿರಿಯನ್ ಕಥೊಲಿಕ್ ವಿವಿಧೋದ್ದೇಶ ಕಾರ್ಯನಿರ್ವಹಣಾಧಿಕಾರಿ ಜೋಸೆಫ್ ಪಿ.ಜೆ ಹೃದಯಾಘಾತದಿಂದ ನಿಧನ

0 comments

ಬೆಳ್ತಂಗಡಿಯ ಸಾಂತೋಮ್ ಟವರ್‌ನಲ್ಲಿರುವ ಸಿರಿಯನ್ ಕಥೊಲಿಕ್ ವಿವಿಧೋದ್ದೇಶ ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ಜೋಸೆಫ್ ಪಿ.ಜೆ ಅವರು ಹೃದಯಾಘಾತದಿಂದ ಇಂದು ಮೃತಪಟ್ಟಿದ್ದಾರೆ.

ಇಂದು ಮಧ್ಯಾಹ್ನ ಕಛೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಇವರಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿತ್ತು. ಅದೇ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿರುವ ಕ್ಲಿನಿಕ್‌ನ ವೈದ್ಯರು ಪರೀಕ್ಷಿಸಿ ಪ್ರಥಮ ಚಿಕಿತ್ಸೆಯನ್ನು ನೀಡಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಕೊನೆಯುಸಿರೆಳೆದಿದ್ದಾರೆ.

ಅವರಿಗೆ 56 ವರ್ಷ ವಯಸ್ಸಾಗಿತ್ತು. ಬೆಳ್ತಂಗಡಿ ಧರ್ಮಪ್ರಾಂತ್ಯದ ಜ್ಞಾನ ನಿಲಯದ ಧರ್ಮೋಪದೇಶ ಕೇಂದ್ರದಲ್ಲಿ ಸುಮಾರು 10 ವರ್ಷಗಳ ಕಾಲ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸಿ, ಬಳಿಕ ಸಿರಿಯನ್ ಕಥೊಲಿಕ್ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ವರ್ಷಗಳ 11 ಕಾಲ ಕರ್ತವ್ಯ ನಿರ್ವಹಿಸಿದ್ದರು.

ಮೃತರು ಪತ್ನಿ ಸಿಂಧೂ ಜೋಸೆಫ್, ಪುತ್ರರಾದ ಜೋನ್ಸನ್ ಪಿ.ಜೆ, ರೋಷನ್ ಪಿ.ಜೆ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

You may also like

Leave a Comment