4
Belthangady: ಓಡಿಲ್ನಾಳ ಗ್ರಾಮದ ಸಂಬೋಳ್ಯ ಬರಮೇಲು ಸುಬ್ರಹ್ಮಣ್ಯ ನಾಯಕ್ ಅವರ ಪುತ್ರ ಗೇರುಕಟ್ಟೆ ಪ್ರೌಢ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಸುಮಂತ್ (15ವ) ನಾಳ ದೇವಸ್ಥಾನದ ಬೆಳಗ್ಗಿನ ಧನುಪೂಜೆಗೆಂದು ಮನೆಯಿಂದ ಹೊರಟವನು ನಿಗೂಢ ನಾಪತ್ತೆಯಾದ ಘಟನೆ ಜ. 14ರಂದು ಬೆಳಗ್ಗೆ ನಡೆದಿದೆ.
ಸ್ಥಳೀಯರು ಹಾಗೂ ಅರಣ್ಯ ಇಲಾಖೆಯವರು ಆತನಿಗಾಗಿ ಹುಡುಕಾಟ ನಡೆಸಿದ ಬಳಿಕ ತೋಟದ ಬಾವಿಯಲ್ಲಿ ಶವ ಪತ್ತೆಯಾಗಿದೆ. ಬಾಲಕ ಬರುವ ದಾರಿಯ ನಡುವೆ ಕೆರೆ ಬಳಿ ರಕ್ತದ ಕಲೆಗಳು ಸ್ಥಳೀಯರಿಗೆ ಕಂಡು ಬಂದಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆಯವರು, ಪೊಲೀಸ್ ಇಲಾಖೆ, ಅಗ್ನಿ ಶಾಮಕ ದಳ ಸ್ಥಳೀಯರು ಸೇರಿದ್ದು ಹುಡುಕಾಟ ನಡೆಸಿದ ಬಳಿಕ ಶವ ಪತ್ತೆಯಾಗಿದೆ. ಸ್ಥಳಕ್ಕೆ ಕ್ಷೇತ್ರ ಶಿಕ್ಷಣ ಅಧಿಕಾರಿ ತಾರಕೇಸರಿ ಬೆಳ್ತಂಗಡಿ ತಹಶೀಲ್ದಾರ್ ಭೇಟಿ ನೀಡಿದ್ದಾರೆ.
