Home » Belthangady: ಚಾರ್ಮಾಡಿ ಘಾಟಿಯಲ್ಲಿ ರಾತ್ರಿ ವೇಳೆ ಸಂಚರಿಸುವ ವಾಹನಗಳಿಗೆ ಹೊಸ ನಿಯಮ ಜಾರಿ!

Belthangady: ಚಾರ್ಮಾಡಿ ಘಾಟಿಯಲ್ಲಿ ರಾತ್ರಿ ವೇಳೆ ಸಂಚರಿಸುವ ವಾಹನಗಳಿಗೆ ಹೊಸ ನಿಯಮ ಜಾರಿ!

0 comments
Charmadi Ghat

Belthangady: ಚಾರ್ಮಾಡಿ ಘಾಟಿಯಲ್ಲಿ ರಾತ್ರಿ ವೇಳೆ ಸಂಚರಿಸುವ ವಾಹನಗಳಿಗೆ ಹೊಸ ನಿಯಮ ಜಾರಿ ಮಾಡಲಾಗಿದೆ. ಇನ್ಮುಂದೆ ಘಾಟಿಯಲ್ಲಿ ಸಾಗುವ ಎಲ್ಲಾ ವಾಹನಗಳನ್ನು ಚೆಕ್‌ಪೋಸ್ಟ್ ನಲ್ಲಿ ಕಡ್ಡಾಯವಾಗಿ ತಪಾಸಣೆ ಮಾಡಿ ಬಳಿಕ ಸಂಚರಿಸುವ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತದೆ.

ಚಾರ್ಮಾಡಿ ಘಾಟಿಯಲ್ಲಿ ರಾತ್ರಿಯ ವೇಳೆ ಗೋ ಕಳ್ಳತನ ಹಾಗೂ ಇನ್ನಿತರ ಅಪರಾಧ ಚಟುವಟಿಕೆಗಳು ನಡೆಯುತ್ತಿವೆ ಎಂಬ ಆರೋಪ ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಇದಕ್ಕೆ ಕಡಿವಾಣ ಹಾಕಲು, ರಾತ್ರಿ ವೇಳೆ ವಾಹನಗಳು ಕೊಟ್ಟಿಗೆಹಾರ ಚೆಕ್ ಪೋಸ್ಟ್ ದಾಟಬೇಕಾದರೆ ಸಂಪೂರ್ಣ ತಪಾಸಣೆಗೊಂಡು ಐದು ವಾಹನಗಳು ಒಟ್ಟಾಗಿ ತೆರಳುವಂತೆ ನಿಯಮ ರೂಪಿಸಲಾಗಿದೆ. ಇನ್ನು ಗೋಕಳ್ಳತನ ಸಹಿತ ಅಪರಾಧ ಕೃತ್ಯಗಳನ್ನು ತಡೆಯಲು ಎಸ್ಪಿ ಡಾ. ವಿಕ್ರಮ್ ಅಮಟೆ ಅವರು ಈ ಯೋಜನೆ ರೂಪಿಸಿದ್ದಾರೆ.

You may also like