9
Belthangady: ಭಾರೀ ಮಳೆ ಕಾರಣದಿಂದ ವಿದ್ಯುತ್ ಶಾಕ್ ಹೊಡೆದು ಪವರ್ ಮ್ಯಾನ್ ಮೃತಪಟ್ಟಿರುವ ಘಟನೆ ಬೆಳ್ತಂಗಡಿ (Belthangady) ತಾಲೂಕಿನ ಕುವೆಟ್ಟು ಗ್ರಾಮದ ಅಮರ್ ಜಾಲು ಎಂಬಲ್ಲಿ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುವೆಟ್ಟು ನಿವಾಸಿ ವಿಜೇಶ್ ಜೈನ್ (27) ಮೃತ ಸಹಾಯಕ ಪವರ್ ಮ್ಯಾನ್. ವಿಜೇಶ್ ಅವರು HT ಲೈನ್ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
