Home » Belthangady: ವರದಿಗಾರ ಭುವನೇಂದ್ರ ಪುದುವೆಟ್ಟು ನಿಧನ

Belthangady: ವರದಿಗಾರ ಭುವನೇಂದ್ರ ಪುದುವೆಟ್ಟು ನಿಧನ

0 comments

Belthangady: ಹಿರಿಯ ವರದಿಗಾರ ಭುವನೇಂದ್ರ ಪುದುವೆಟ್ಟು (42) ಇಂದು (ನ.19) ನಿಧನ ಹೊಂದಿದ್ದಾರೆ.

ಎರಡು ದಿನಗಳ ಹಿಂದೆ ತೀವ್ರಹೊಟ್ಟೆನೋವು ಮತ್ತು ವಾಂತಿ ಕಾಣಿಸಿಕೊಂಡಿದ್ದರಿಂದ ಮೂಡಬಿದ್ರೆಯ ಆಳ್ವಾಸ್‌ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ತಪಾಸಣೆ ಸಂದರ್ಭದಲ್ಲಿ ಪಿತ್ತಕೋಶದಲ್ಲಿ ಕಲ್ಲು ಇರುವುದು ಪತ್ತೆಯಾಗಿದ್ದು, ಅಕ್ಯುಟ್‌ ಪ್ರಾಂಕಿಯಾಸಿಸ್‌ ಇರುವುದು ತಿಳಿದು ಬಂದಿದೆ. ಕೂಡಲೇ ಅವರನ್ನು ಮಂಗಳೂರು ಅತ್ತಾವರದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ನ.19 ರಂದು ಇವರು ನಿಧನ ಹೊಂದಿದ್ದಾರೆ.

ಕರಾವಳಿ ಅಲೆ, ವೆಬ್‌ದುನಿಯಾ, ಕಸ್ತೂರಿ ಚಾನೆಲ್‌, ವಿಜಯವಾಣಿ ಸಂಸ್ಥೆಗಳಲ್ಲಿ ತಮ್ಮ ಕರ್ತವ್ಯ ನಿರ್ವಹಿಸಿದ್ದ ಭುವನೇಂದ್ರ ಪುದುವೆಟ್ಟು ಅವರು ಇತ್ತೀಚೆಗೆ ಬೆಳ್ತಂಗಡಿಯ ಸುದ್ದಿ ಬಿಡುಗಡೆ ಪತ್ರಿಕೆಯ ಮುಖ್ಯ ವರದಿಗಾರರಾಗಿ ಕೆಲಸ ಮಾಡುತ್ತಿದ್ದರು.

ತಂದೆ ನಾರಾಯಣ ಪೂಜಾರಿ, ತಾಯಿ ಮೋಹಿನಿ, ಪತ್ನಿ ಸುಜಾತ, ಇಬ್ಬರು ಪುಟ್ಟ ಮಕ್ಕಳು, ಸಹೋದರ ಯತೀಂದ್ರ ಮತ್ತು ಸಹೋದರಿಯನ್ನು ಅಗಲಿದ್ದಾರೆ.

You may also like

Leave a Comment