Home » Belthangady: ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವತಿ ಸಾವು

Belthangady: ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವತಿ ಸಾವು

0 comments
Belthangady

Belthangady: ಪುದುವೆಟ್ಟು ಗ್ರಾಮದ ಬೊಳ್ಮನಾರಿನಲ್ಲಿ ಯುವತಿಯೋರ್ವಳು ಆತ್ಮಹತ್ಯೆಗೆ ಯತ್ನಿಸಿದ್ದು, ಇದೀಗ ಚಿಕಿತ್ಸೆ ಫಲಕಾರಿಯಾಗದೆ ಮೃತ ಹೊಂದಿರುವುದಾಗಿ ತಿಳಿದು ಬಂದಿದೆ.

ಬೊಳ್ಮನಾರಿನ ನಿವಾಸಿ ಬೆಳ್ತಂಗಡಿ ಖಾಸಗಿ ಪದವಿ ಪೂರ್ವ ಕಾಲೇಜಿನ ಪ್ರಥಮ ವರ್ಷದ ಸೈನ್ಸ್‌ ವಿದ್ಯಾರ್ಥಿನಿ ಹಲವು ದಿನಗಳ ಹಿಂದೆ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದರೂ, ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ ಮೃತ ಹೊಂದಿದ್ದಾರೆ. ಬೊಳ್ಮನಾರಿನ ವೆಂಕಟೇಶ್‌ ಅವರ ಪುತ್ರಿ ಇವರಾಗಿದ್ದು, ಆತ್ಮಹತ್ಯೆ ಕೃತ್ಯಕ್ಕೆ ಕಾರಣ ಇನ್ನೂ ತಿಳಿದು ಬಂದಿಲ್ಲ.

ಮೃತ ವಿದ್ಯಾರ್ಥಿನಿಯನ್ನು ಅನಿತಾ (17 ವರ್ಷ) ಎಂದು ಗುರುತಿಸಲಾಗಿದೆ. ಇವರು ಜುಲೈ 3 ರಂದು ಮಧ್ಯರಾತ್ರಿ ಕೊನೆಯುಸಿರೆಳಿದಿದ್ದಾರೆ. ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

School Holiday Today: ಇಂದು ರಾಜ್ಯದ ಈ ತಾಲೂಕುಗಳ ಪ್ರಾಥಮಿಕ-ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

You may also like

Leave a Comment