2
Bengaluru: ಬೆಂಗಳೂರಿನ (Bengaluru)ರೆಸಾರ್ಟ್‌ವೊಂದರಲ್ಲಿ ನೃತ್ಯ ಮಾಡುತ್ತಿದ್ದ ವೇಳೆ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಮೃತ ವ್ಯಕ್ತಿ ಬಸವರಾಜ್ (46), ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಸರ್ಜಾಪುರ ಗ್ರಾಮದ ನಿವಾಸಿಯಾಗಿದ್ದು, ಕಳೆದ ನಾಲ್ಕು ವರ್ಷಗಳಿಂದ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್ ಆಗಿ ಕೆಲಸ ನಿರ್ವಹಿಸುತ್ತಿದ್ದರು.
ನಿನ್ನೆ ರಾತ್ರಿ ಬಸವರಾಜ್ ತಮ್ಮ ಕಂಪನಿಯ ಸ್ನೇಹಿತರೊಂದಿಗೆ ನಗರದ ಹೊರವಲಯದಲ್ಲಿರುವ ರೆಸಾರ್ಟ್ ನಲ್ಲಿ ಕುಣಿದು ಕುಪ್ಪಳಿಸುತ್ತಿದ್ದ ಸಂದರ್ಭದಲ್ಲಿ, ಏಕಾಏಕಿ ನೆಲಕ್ಕುರುಳಿದರು. ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋದರೂ, ವೈದ್ಯರು ಅವರನ್ನು ಈಗಾಗಲೇ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.
