1
Bengaluru: ಬೆಂಗಳೂರು ದುರಂತಕ್ಕೆ ಸಂಬಂಧ ಪಟ್ಟಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಸೇರಿದಂತೆ ಐವರು ಪೊಲೀಸರನ್ನು ಅಮಾನತು ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಇದೀಗ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ.
ರಾಜ್ಯ ಸರ್ಕಾರ ತನ್ನನ್ನು ತಾನು ಬಚಾಯಿಸಿಕೊಳ್ಳಲು ಈ ರೀತಿ ಪೊಲೀಸರ ಮೇಲೆ ಗೂಬೆ ಕೂರಿಸುತ್ತಿದ್ದೆ ಎಂದು ಬಿಜೆಪಿ ಕಿಡಿಕಾರಿದ್ದು, ಇದಕ್ಕೆ ಉತ್ತರಿಸಿದ ಸಿ ಎಂ ಸಿದ್ಧರಾಮಯ್ಯ, ಬಿಜೆಪಿ ಇದರಲ್ಲೂ ಕೂಡ ರಾಜಕೀಯ ಮಾಡುತ್ತಿದ್ದು ತಾನು ಆ ರೀತಿ ಮಾಡುತ್ತಿಲ್ಲ. ಭದ್ರತೆಯ ವಿಷಯದಲ್ಲಿ ಲೋಪ ಉಂಟಾಗಿದೆ ಹಾಗಾಗಿ ಪೊಲೀಸರನ್ನು ಅಮಾನತುಗೊಳಿಸಲಾಗಿದೆ ಎಂದು ತಮ್ಮನ್ನು ತಾವು ಸಮರ್ಥಿಸಿಕೊಂಡಿದ್ದಾರೆ.
