Home » Bidar: ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಕುಡಿಯೋ ನೀರಿನ ಟ್ಯಾಂಕ್‍ಗೆ ಹಾರಿ ಆತ್ಮಹತ್ಯೆ !

Bidar: ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಕುಡಿಯೋ ನೀರಿನ ಟ್ಯಾಂಕ್‍ಗೆ ಹಾರಿ ಆತ್ಮಹತ್ಯೆ !

by ಹೊಸಕನ್ನಡ
1 comment
Bidar

Bidar: ಕುಡಿಯುವ ನೀರಿನ ಟ್ಯಾಂಕ್‍ಗೆ ಹಾರಿ ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ಬೀದರ್ (Bidar) ತಾಲೂಕಿನ ಅಣದೂರ್ ಗ್ರಾಮದಲ್ಲಿ ನಡೆದಿದೆ. ಬೇರೊಬ್ಬನ ಜೊತೆ ಅನೈತಿಕ ಸಂಬಂಧ ಕಂಡು ಬಂದ ಹಿನ್ನೆಲೆಯಲ್ಲಿ, ಆತನ ಪತ್ನಿ ಆತನೊಂದಿಗೆ ಪರಾರಿಯಾಗಿದ್ದಳು. ಇದರಿಂದ ತೀವ್ರ ನೊಂದ ಹುಡುಗ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ.

ಹೀಗೆ ನೀರಿನ ಟ್ಯಾಂಕಿಗೆ ಹಾರಿ ಮೃತಪಟ್ಟ ವ್ಯಕ್ತಿಯನ್ನು 27 ವರ್ಷ ವಯಸ್ಸಿನ ದಾಸರ್ ಎಂದು ಗುರುತಿಸಲಾಗಿದೆ. ಕಳೆದ ಎರಡು ದಿನಗಳ ಹಿಂದೆಯೇ ಆತ ಕುಡಿಯುವ ನೀರಿನ ಟ್ಯಾಂಕಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದರೂ, ಅದು ಯಾರ ಗಮನಕ್ಕೂ ಬಂದಿರಲಿಲ್ಲ. ಆದರೆ ಕಳೆದೊಂದು ದಿನಗಳಿಂದ ನೀರಿನ ನಳ್ಳಿಯಲ್ಲಿ ನೀರು ವಾಸನೆ ಬರಲು ಶುರುವಾಗಿತ್ತು. ಆಗ ಅನುಮಾನಗೊಂಡ ಊರವರು ನೀರಿನ ಟ್ಯಾಂಕ್‍ನ್ನು ಪರಿಶೀಲಿಸಿದಾಗ ದಾಸರ್ ಮೃತ ದೇಹ ಆ ನೀರಿನ ಟ್ಯಾಂಕಿನಲ್ಲಿ ತೇಲುತ್ತಿತ್ತು. ತದನಂತರ ಅಗ್ನಿಶಾಮಕ ದಳದ ಸಿಬ್ಬಂದಿ ಮೃತದೇಹ ಹೊರಗೆ ತೆಗೆದಿದ್ದಾರೆ. ಊರ ನೀರು ಖಾಲಿ ಮಾಡಿ ಟ್ಯಾಂಕ್ ಸ್ವಚ್ಛಗೊಳಿಸಿದ್ದಾರೆ.

ಇದನ್ನೂ ಓದಿ: ವಿಜಯ್ ರಾಘವೇಂದ್ರ ಕುಟುಂಬಕ್ಕೆ ಮತ್ತೊಂದು ಆಘಾತ; ಸ್ಪಂದನಾ ಅಗಲಿಕೆ ಬೆನ್ನಲ್ಲೇ ಕುಟುಂಬದಲ್ಲಿ ಮತ್ತೊಂದು ಸಾವು, ಮುಗಿಲು ಮುಟ್ಟಿದ ಆಕ್ರಂದನ

ಆದರೆ ಈಗಾಗಲೇ ಕುಡಿಯುವ ನೀರು ಬಳಸಿದ ಗ್ರಾಮಸ್ಥರು ಭಯಗೊಂಡಿದ್ದಾರೆ. ಕುಡಿಯುವ ನೀರಿನಲ್ಲಿ ಶವ ಪತ್ತೆಯಾದ ಹಿನ್ನೆಲೆ, ಆರೋಗ್ಯ ಇಲಾಖೆಯ ಸಿಬ್ಬಂದಿ ಗ್ರಾಮದಲ್ಲಿ ವಾಸ್ತವ್ಯ ಹೂಡಿದ್ದು, ಟ್ಯಾಂಕ್ ನೀರು ಕುಡಿದು ಯಾರಿಗಾದರೂ ಆರೋಗ್ಯದ ಸಮಸ್ಯೆಯಾದರೆ ಅಗತ್ಯ ಚಿಕಿತ್ಸೆ ಪಡೆಯುವಂತೆ ಅಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ. ಈ ಸಂಬಂಧ ಬೀದರ್ ಜಿಲ್ಲೆಯ ಜನವಾಡ ಠಾಣೆಯಲ್ಲಿ (Janavada Police) ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಮೊದಲ ಮುಟ್ಟಿನ ನೋವು; 14ರ ಬಾಲಕಿ ಆತ್ಮಹತ್ಯೆ

You may also like

Leave a Comment