Home » Big breaking News | ಅತ್ಯಾಚಾರ ಪ್ರಕರಣ ಹಿನ್ನೆಲೆ ಪೋಕ್ಸೋ ಕಾಯ್ದೆಯಡಿ ಮುರುಘಾಶ್ರೀ ಬಂಧನ

Big breaking News | ಅತ್ಯಾಚಾರ ಪ್ರಕರಣ ಹಿನ್ನೆಲೆ ಪೋಕ್ಸೋ ಕಾಯ್ದೆಯಡಿ ಮುರುಘಾಶ್ರೀ ಬಂಧನ

0 comments

ಚಿತ್ರದುರ್ಗದ ಮುರುಘಾ ಮಠದ ಹಾಸ್ಟೆಲ್ ನಲ್ಲಿ ವ್ಯಾಸಂಗ ಮಾಡುತ್ತಿದ್ದ ಅಪ್ರಾಪ್ತ ವಯಸ್ಸಿನ ಇಬ್ಬರು ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದ ಮೇಲೆ ಚಿತ್ರದುರ್ಗದ ಮುರುಘಾ ಮಠದಲ್ಲಿಯೇ ಮುರುಘಾ ಶ್ರೀ ಅವರನ್ನು ಪೋಕ್ಸೋ ಕಾಯ್ದೆಯಡಿ ಚಿತ್ರದುರ್ಗ ಪೊಲೀಸರು ಗುರುವಾರ ರಾತ್ರಿ ಬಂಧಿಸಿದ್ದಾರೆ.

ಚಿತ್ರದುರ್ಗ ಗ್ರಾಮಾಂತರ ಠಾಣೆಯ ಸಿಪಿಐ ಬಾಲಚಂದ್ರ ನಾಯ್ಕ್‌, ಮೊಳಕಾಲ್ಮೂರು ಠಾಣೆ ಸಿಪಿಐ ಸತೀಶ್ ಅವರುಗಳು ಮಠದ ಒಳಗೆ ಪ್ರವೇಶಿಸಿ, ಪ್ರಕರಣ ದಾಖಲಾಗಿ 6 ದಿನಗಳ ನಂತರ ಬಂಧನದ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದರು. ಶ್ರೀಗಳನ್ನು ಬಂಧಿಸಿದ ಪೊಲೀಸರು ಅವರನ್ನು ಠಾಣೆಯತ್ತ ಕರೆದೊಯ್ಯಲಿದ್ದಾರೆ.

ಅದಕ್ಕೂ ಮುನ್ನ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಿದ್ದಾರೆ. ಆದರೆ ಮತ್ತೊಂದು ಮಾಹಿತಿ ಪ್ರಕಾರ ಶ್ರೀಗಳನ್ನು ಬಂಧಿಸಿ ಅಜ್ಞಾತ ಸ್ಥಳಕ್ಕೆ ಕರೆದೊಯ್ಯುತ್ತಿರುವ ಮಾಹಿತಿಯಿದೆ.

You may also like

Leave a Comment