Home » BJP: ರಾಜ್ಯ ಬಿಜೆಪಿಗೆ ಬಿಗ್ ಶಾಕ್- ಪಕ್ಷ ತೊರೆದ ರಾಜ್ಯದ ಪ್ರಬಲ ಶಾಸಕ

BJP: ರಾಜ್ಯ ಬಿಜೆಪಿಗೆ ಬಿಗ್ ಶಾಕ್- ಪಕ್ಷ ತೊರೆದ ರಾಜ್ಯದ ಪ್ರಬಲ ಶಾಸಕ

0 comments

BJP: ಸ್ವತಹ ಬಿಜೆಪಿ ಶಾಸಕರಾಗಿರುವ ಎಸ್ ಟಿ ಸೋಮಶೇಖರ್ ಅವರು ಕಾಂಗ್ರೆಸ್ ಪರ ಒಲವು ತೋರುತ್ತಿರುವುದು ಎಲ್ಲರಿಗೂ ತಿಳಿದೇ ಇದೆ. ಇತ್ತೀಚಿಗೆ ಅವರು ಬಿಜೆಪಿಯ(BJP) 8 ಶಾಸಕರು ಕಾಂಗ್ರೆಸ್ ಸೇರುತ್ತಾರೆ ಎಂದು ಹೇಳಿಕೆ ನೀಡಿ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದ್ದರು. ಇದೀಗ ಈ ಬೆನ್ನಲ್ಲೇ ಬಿಜೆಪಿಯ ಪ್ರಬಲ ಶಾಸಕರೊಬ್ಬರು ತಾನು ಪಕ್ಷದಿಂದ ಹೊರಗುಳಿದಿದ್ದೇನೆ ಎಂಬುದಾಗಿ ಸ್ಟೇಟ್ಮೆಂಟ್ ನೀಡಿ ಎಲ್ಲರಿಗೂ ಅಚ್ಚರಿ ಮೂಡಿಸಿದ್ದಾರೆ

ಹೌದು, ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್(S T Somshekhar) ಪಕ್ಷದಿಂದ ದೂರವಾಗಿದ್ದು, ಕಾಂಗ್ರೆಸ್ ಗೆ ಹತ್ತಿರವಾಗಿದ್ದಾರೆ. ಇದೀಗ ಈ ನಡುವೆಯೇ ಅವರ ಜೊತೆಗಾರ, ಅವರೊಂದಿಗೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದಂತಹ ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್(Shivram Hebbar)ಅವರೂ ಕೂಡ ನಾನು ಬಿಜೆಪಿಯಿಂದ ಕಾಲು ಹೊರಗಿಟ್ಟಿದ್ದೇನೆ ಎಂದು ಹೇಳಿದ್ದಾರೆ.

ಮುಂಡಗೋಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಿವರಾಮ್ ಹೆಬ್ಬಾರ್, ನಾನು ಬಿಜೆಪಿಯಿಂದ ಒಂದು ಕಾಲನ್ನು ಹೊರಗೆ ಇಟ್ಟಿದ್ದೇನೆ ಎಂದಾದರೂ ಬರೆದುಕೊಳ್ಳಿ ಅಥವಾ ಎರಡು ಕಾಲು ಹೊರಗಿಟ್ಟಿದ್ದೇನೆ ಎಂದಾದರೂ ಬರೆದುಕೊಳ್ಳಿ, ರಾಜಕೀಯದಲ್ಲಿ ಯಾವಾಗ ಯಾವ ನಿರ್ಣಯ ತೆಗೆದುಕೊಳ್ಳಬೇಕಿದೆ ಎನ್ನುವುದು ನನಗೆ ಗೊತ್ತಿದೆ ಎಂದು ಅವರು ಹೇಳಿದ್ದಾರೆ.

ಇಷ್ಟೇ ಅಲ್ಲದೆ ಹೆಬ್ಬಾರ್ ಅವರು ಕೆಲವು ಬಿಜೆಪಿ ಶಾಸಕರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ಶಾಸಕ ಎಸ್.ಟಿ. ಸೋಮಶೇಖರ್ ಹೇಳಿರುವುದರಲ್ಲಿ ಸತ್ಯಾಂಶವಿದೆ ಎಂದು ತಿಳಿಸಿದ್ದಾರೆ. ಈ ಮೂಲಕ ಇನ್ನು ಕೆಲವು ಶಾಸಕರು ಕಾಂಗ್ರೆಸ್ ಸೇರುವುದು ಪಕ್ಕ ಎನ್ನುವಂತಾಗಿದೆ.

You may also like

Leave a Comment