KSRTC: ಮುಷ್ಕರಕ್ಕೆ ಮುಂದಾದ ರಾಜ್ಯದ ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರವು ಬಿಗ್ ಶಾಕ್ ನೀಡಿದ್ದು, ರಜೆ ರದ್ದುಗೊಳಿಸಲು ಸೂಚನೆ ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಹೌದು, ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ನಾಳೆಯಿಂದ ರಾಜ್ಯಾದ್ಯಂತ ಸಾರಿಗೆ ನೌಕರರು ಮುಷ್ಕರ ಹಮ್ಮಿಕೊಂಡಿದ್ದು ಈ ಹಿನ್ನೆಲೆಯಲ್ಲಿ ನಾಳೆಯಿಂದ ರಸ್ತೆಗೆ ಬಸ್ ಇಳಿಯುವುದು ಬಹುತೇಕ ಡೌಟ್ ಎನ್ನಲಾಗುತ್ತಿದೆ. ಇದರ ಬೆನ್ನೆಲೆ ನೌಕರರಿಗೆ ಸಾರಿಗೆ ಇಲಾಖೆ ಶಾಕ್ ನೀಡಿದ್ದು ಮುಷ್ಕರದಲ್ಲಿ ಪಾಲ್ಗೊಳ್ಳುವ ನೌಕರರ ರಜೆ ರದ್ದುಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ.
ಅಲ್ಲದೆ ನಾಳೆಯಿಂದ ಸಾರಿಗೆ ಸಿಬ್ಬಂದಿ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ನಾಳೆಯಿಂದ ನೌಕರರ ರಜೆ ರದ್ದು ಮಾಡಿದ ಸಾರಿಗೆ ಇಲಾಖೆ (Transport Department) ಮುಷ್ಕರದಲ್ಲಿ ಭಾಗಿ ಆದರೆ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ. ಮಾತ್ರವಲ್ಲದೇ ಕೆಲಸ ಮಾಡಿಲ್ಲ ಎಂದಾದರೆ ಸಂಬಳವನ್ನೂ ನೀಡಲ್ಲ ಎಂದು ಇಲಾಖೆ ವಾರ್ನಿಂಗ್ ಮಾಡಿದೆ.
ಇನ್ನು ನಾಳೆಯಿಂದ ಸಾರಿಗೆ ನೌಕರರು ತಮ್ಮ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅನಿರ್ಧಿಷ್ಟಾವಧಿ ಮುಷ್ಕರ ಕೈಗೊಂಡಿದ್ದು, ಈಗಾಗಲೇ ಎಚ್ಚರಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಸಿಎಂ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಯಲಿದ್ದು, ಅನಿರ್ದಿಷ್ಟಾವಧಿ ಮುಷ್ಕರದ ಭವಿಷ್ಯ ನಿರ್ಧಾರವಾಗಲಿದೆ.
