Dakshina Kannada: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟಿರುವ ಆರೋಪಕ್ಕೆ ಸಂಬಂಧಪಟ್ಟಂತೆ ಎಸ್‌ಐಟಿ ತನಿಖೆ ನಡೆಯುತ್ತಿದ್ದು, ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಅಪ್ಲೋಡ್ ಮಾಡಿದ ನೆಟ್ಟಿಗರಿಗೆ ಎಸ್‌ಐಟಿ ನೋಟಿಸ್ ನೀಡಲು ಸಿದ್ಧತೆ ಮಾಡಿಕೊಂಡಿರುವ ಕುರಿತು ವರದಿಯಾಗಿದೆ.
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಊಹಾಪೋಹದ ವಿಡಿಯೋಗಳನ್ನು ಹರಿಯಬಿಟ್ಟವರಿಗೆ ಎಸ್‌ಐಟಿ ನೋಟಿಸ್ ನೀಡಲು ಆರಂಭಿಸಿದೆ ಎನ್ನಲಾಗಿದೆ. ತನಿಖೆ ಕುರಿತು ಇಲ್ಲ ಸಲ್ಲದ ಕುರಿತು ಹೇಳಿಕೆ ನೀಡಿದವರ ಪಟ್ಟಿ ರೆಡಿಯಾಗಿದೆ ಎನ್ನಲಾಗಿದೆ.
ಕಳೆದ ಒಂದೂವರೆ ತಿಂಗಳಿನಿಂದ ಸಾಮಾಜಿಕ ಜಾಲತಾಣದ ಮೇಲೆ ಎಸ್‌ಐಟಿ ಹದ್ದಿನ ಕಣ್ಣಿಟ್ಟಿದ್ದು, ಇದೀಗ ಸಾಮಾಜಿಕ ಜಾಲತಾಣಿಗರ ಪಟ್ಟಿಯನ್ನು ಸಿದ್ಧಪಡಿಸಿದ್ದು, ಎಲ್ಲರಿಗೂ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ನೋಟಿಸ್ ನೀಡಲು ಮುಂದಾಗಿದೆ ಎಂದು ವರದಿಯಾಗಿದೆ.
ನೂರಾರು ಶವ ಹೂತಿಟ್ಟಿದ್ದೇನೆ ಎಂದು ಮುಸುಕುಧಾರಿಯನ್ನು ಎಸ್‌ಐಟಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಮಾಸ್ಕ್‌ಮ್ಯಾನ್ ತನ್ನ ವಕೀಲರ ಜೊತೆ ಖಾಸಗಿ ವಾಹನದಲ್ಲಿ ಬೆಳ್ತಂಗಡಿಯ ಎಸ್‌ಐಟಿ ಕಚೇರಿಗೆ ಬಂದಿದ್ದು, ಮುಂದೇನಾಗುತ್ತದೆ ಎನ್ನುವುದನ್ನು ಕಾದು ನೋಡಬೇಕಿದೆ.
