Gold Suresh: ಬಿಗ್ ಬಾಸ್ ಖ್ಯಾತಿಯ ಗೋಲ್ಡ್ ಸುರೇಶ ಅವರು ದಿಢೀರ್ ಎಂದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದೀಗ ಅವರ ಅಭಿಮಾನಿಗಳಲ್ಲಿ ಆತಂಕ ಹೆಚ್ಚಾಗಿದೆ.
ಹೌದು, ಬೆಳಗಾವಿಯ ಅಥಣಿ ತಾಲೂಕಿನ ಪಾರ್ಥನಹಳ್ಳಿಯಿಂದ ಬಂದು ಬೆಂಗಳೂರಿನಲ್ಲಿ ಬದುಕು ಕಟ್ಟಿಕೊಂಡಿರುವ ಗೋಲ್ಡ್ ಸುರೇಶ್ ಮೊನ್ನೆ ಮೊನ್ನೆ ಮುಕ್ತಾಯವಾದ ಬಿಗ್ ಬಾಸ್ ಕನ್ನಡದ ಹನ್ನೊಂದನೇ ಸೀಸನ್‌ನಲ್ಲಿ ಕೂಡ ಭಾಗವಹಿಸಿದ್ದರು. ತಮ್ಮ ಆಟದಿಂದ ಗಮನ ಸೆಳೆದಿದ್ದರು. ಇಂಥಾ ಗೋಲ್ಡ್ ಸುರೇಶ್ ಸದ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅಷ್ಟಕ್ಕೂ ಆಗಿದ್ದೇನು?
ಬಿಗ್ ಬಾಸ್ ಮನೆಯಲ್ಲಿದ್ದಾಗ ಟಾಸ್ಕ್ ನಿರ್ವಹಿಸುವ ಸಮಯದಲ್ಲಿ ಗೋಲ್ಡ್ ಸುರೇಶ್ ತಮ್ಮ ಕಾಲಿಗೆ ಪೆಟ್ಟು ಮಾಡಿಕೊಂಡಿದ್ದರು. ಡ್ರಮ್ ತುಂಬಾ ನೀರು ತುಂಬಿಸಿ ಅದನ್ನು ಹೊರಚೆಲ್ಲದಂತೆ ನೋಡಿಕೊಳ್ಳುವ ಸಮಯದಲ್ಲಿ ಗೋಲ್ಡ್ ಸುರೇಶ್ ತುಂಬಿದ ಡ್ರಂ ಬಿದ್ದಿತ್ತು. ಡ್ರಮ್ ತಮ್ಮ ಕಾಲಿನ ಮೇಲೆ ಬೀಳುತ್ತಿದ್ದಂತೆ ಗೋಲ್ಡ್ ಸುರೇಶ್ ನೋವಲ್ಲಿ ಒದ್ದಾಡಿ ಹೋಗಿದ್ದರು. ಬಳಿಕ ಅವರಿಗೆ ಬಿಗ್ ಬಾಸ್ ಮನೆಯಲ್ಲಿ ಟ್ರೀಟ್ಮೆಂಟ್ ನೀಡಲಾಗಿತ್ತು. ನಂತರ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಎಲ್ಲವೂ ಸರಿಯಾಗಿದೆ ಎನ್ನಲಾಗಿತ್ತು. ಅದರೀಗ ಆ ಮನೆಯಲ್ಲಿ ಆದ ಗಾಯ. ಉಲ್ಭಣಗೊಂಡಿದೆ. ಈ ಹಿನ್ನೆಲೆ ಇಂದು ಗೋಲ್ಡ್ ಸುರೇಶ್ ಆಸ್ಪತ್ರೆಗೆ ದಾಖಲಾಗಿದ್ದು, ನಾಳೆ ಆಪರೇಷನ್ ನಡೆಯಲಿದೆ. ಎನ್ನಲಾಗಿದೆ.
