Bihar: ಬಿಹಾರ ವಿಧಾನಸಭಾ ಚುನಾವಣೆಯ ಚಟುವಟಿಕೆಗಳು ಗರಿಗೆದರಿವೆ. ಕಗ್ಗಂಟಾಗಿದ್ದ ಎನ್‌ಡಿಎ,ಜೆಡಿಯು ಹಾಗೂ ಎಲ್‌ಜೆಪಿ ಸೀಟು ಹಂಚಿಕೆ ಮಾತುಕತೆ ಕೊನೆಗೆ ಸುಖಾಂತ್ಯಗೊಂಡಿದೆ. ಹಲವು ಸುತ್ತಿನ ಮಾತುಕತೆ ಬಳಿಕ ಆಡಳಿತರೂಢ ಬಿಜೆಪಿ ಹಾಗೂ ಜೆಡಿಯು ಮೈತ್ರಿ ತಲಾ 101 ಸ್ಥಾನ ಹಂಚಿಕೆ ಮಾಡಿದೆ.
ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಮತ್ತು ನಿತೀಶ್ ಕುಮಾರ್ ಅವರ ಜೆಡಿಯು ಸಮಬಲದ ಸ್ಪರ್ಧೆಗೆ ಮುಂದಾಗಿದೆ. ಎರಡೂ ಪಕ್ಷಗಳು ತಲಾ 101 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲಿದೆ. ಚಿರಾಗ್ ಪಾಸ್ವಾನ್ ಅವರ ಲೋಕಜನಶಕ್ತಿ ಪಕ್ಷವು 29 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲಿದೆ.
ದೆಹಲಿಯಲ್ಲಿ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಸೀಟು ಹಂಚಿಕೆ ಫೈನಲ್ ಆಗಿದೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವಾ ರಾಜನಾಥ್ ಸಿಂಗ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಹಲವು ಪ್ರಮುಖರು ಈ ಸಭೆಯಲ್ಲಿ ಪಾಲ್ಗೊಂಡಿದ್ದರು.
ಇದನ್ನೂ ಓದಿ:USA: ಅಮೆರಿಕಾದ ಕಾಲೇಜುಗಳಲ್ಲಿನ್ನು 5% ಭಾರತೀಯರಿಗೆ ಅಷ್ಟೇ ಅವಕಾಶ!
ಅಂದಹಾಗೆ NDA ನಾಯಕರು ಮತ್ತು ಕಾರ್ಯಕರ್ತರು ಒಪ್ಪಂದವನ್ನು ಉತ್ಸಾಹದಿಂದ ಸ್ವಾಗತಿಸಿದ್ದಾರೆ, ಬಿಹಾರದಲ್ಲಿ ಮತ್ತೊಮ್ಮೆ ಸರ್ಕಾರ ರಚಿಸಲು ಮೈತ್ರಿಕೂಟದ ಸಿದ್ಧತೆಯಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
