Home » Bengaluru: ಬೆಂಗಳೂರಿನಲ್ಲಿ ಮರದ ಕೊಂಬೆ ಬಿದ್ದು ಬೈಕ್ ಸವಾರನ ಸ್ಥಿತಿ ಗಂಭೀರ

Bengaluru: ಬೆಂಗಳೂರಿನಲ್ಲಿ ಮರದ ಕೊಂಬೆ ಬಿದ್ದು ಬೈಕ್ ಸವಾರನ ಸ್ಥಿತಿ ಗಂಭೀರ

0 comments
Karnataka Rain

ಬೆಂಗಳೂರು: ರಾಜ್ಯದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಬೆಂಗಳೂರಿನ ಬನಶಂಕರಿ 2ನೇ ಹಂತದ ಶ್ರೀನಿವಾಸ ನಗರದಲ್ಲಿ ಗಾಳಿ ಮಳೆಯಿಂದ ಮರದ ಕೊಂಬೆ ಮುರಿದು ಬಿದ್ದು ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. 

 

ಬೈಕ್ ಸವಾರ ಅಕ್ಷಯ್ ಮೇಲೆ ಮರದ ಕೊಂಬೆ ಮುರಿದು ಬಿದ್ದಿದ್ದು, ಇದರಿಂದ ಗಂಭೀರವಾಗಿ ಗಾಯಗೊಂಡಿರುವ ಅಕ್ಷಯನನ್ನು ಸ್ಥಳೀಯ ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗಾಗಿ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವು ಬದುಕಿನ ನಡುವೆ ಹೋರಾಡುತ್ತಿರುವ ಅಕ್ಷಯ್ ಚಿಕಿತ್ಸೆ ಹಣ ಹೊಂದಿಸಲು ಕುಟುಂಬಸ್ಥರು ಪರದಾಡಿದ್ದಾರೆ

You may also like