5
BJP Leader Babban Singh: ಬಿಜೆಪಿ ನಾಯಕ ಮದುವೆ ಕಾರ್ಯಕ್ರಮವೊಂದರಲ್ಲಿ ನರ್ತಕಿ ಜೊತೆ ಅಶ್ಲೀಲವಾಗಿ ನಡೆದುಕೊಂಡಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಹಿನ್ನೆಲೆಯಲ್ಲಿ ಪಕ್ಷದಿಂದ ಬಿಜೆಪಿ ನಾಯಕನನ್ನು ಉಚ್ಛಾಟನೆ ಮಾಡಲಾಗಿದೆ.
ಉತ್ತರ ಪ್ರದೇಶದ ಬಾಲಿಯಾ ಜಿಲ್ಲೆಯ ಹಿರಿಯ ಬಿಜೆಪಿ ನಾಯಕ ಬಬ್ಬನ್ ಸಿಂಗ್ ರಘುವಂಶಿ ವಿರುದ್ಧ ಭಾರತೀಯ ಜನತಾ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಕಚೇರಿ ಪ್ರಭಾರಿ ಗೋವಿಂದ ನಾರಾಯಣ ಶುಕ್ಲ ಅವರು ಅಧಿಕೃತ ಪತ್ರವನ್ನು ಬಿಡುಗಡೆ ಮಾಡಿದ್ದು, ಪಕ್ಷದ ಶಿಸ್ತು, ಹಾಗೂ ಮೌಲ್ಯಗಳ ವಿರುದ್ಧವಿದೆ ಎಂದು ಉಲ್ಲೇಖ ಮಾಡಿದ್ದಾರೆ.
