Home » ಬಿಜೆಪಿ ನಾಯಕನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬಿಜೆಪಿ ನಾಯಕನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

by Praveen Chennavara
0 comments

ಬಿಜೆಪಿ ನಾಯಕರೊಬ್ಬರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.ಹೈದರಾಬಾದ್‌ನ ಬಿಜೆಪಿ ನಾಯಕ ಜ್ಞಾನೇಂದ್ರ ಪ್ರಸಾದ್ ಶವ ಅವರ ನಿವಾಸದಲ್ಲಿ ಪತ್ತೆಯಾಗಿದೆ.

ಮಿಯಾಪುರ್ ಪೊಲೀಸ್ ಠಾಣೆಗೆ ಬಂದ ಫೋನ್ ಕರೆ ಆಧರಿಸಿ ಪೊಲೀಸರು ಮನೆಗೆ ಭೇಟಿ ನೀಡಿ ಪರಿಶೀಲಿಸಿದಾಗ ಫ್ಯಾನಿಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಜ್ಞಾನೇಂದ್ರ ಪ್ರಸಾದ್ ದೇಹ ಪತ್ತೆಯಾಗಿದೆ.

ಬಿಜೆಪಿ ನಾಯಕ ಜ್ಞಾನೇಂದ್ರ ಪ್ರಸಾದ್ ಎಂದು ಗೊತ್ತಾಗಿದ್ದು ಯಾವ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡರು,ಅಥವಾ ಯಾರಾದರೂ ಕೊಲೆ ಮಾಡಿರಬಹುದೇ ಎಂದು ತನಿಖೆಯಿಂದಷ್ಟೇ ಗೊತ್ತಾಗಬೇಕಾಗಿದೆ.

ಮೃತದೇಹವನ್ನು ಸ್ಥಳೀಯ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ವರ್ಗಾಯಿಸಲಾಗಿದ್ದು. ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

You may also like

Leave a Comment