ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು (Praveen Nettar) ಕೊಲೆ ಪ್ರಕರಣಕ್ಕೆ ಕುರಿತು ಮತ್ತಿಬ್ಬರು ಆರೋಪಿಗಳ ಪತ್ತೆಗೆ NIA ಬಹುಮಾನ ಘೋಷಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೊಡಾಜೆಯ ಕೊಡಾಜೆ ಅದ್ದ ಮಗ ಷರೀಫ್ ಮತ್ತು ನೆಕ್ಕಿಲಾಡಿಯ ಅಗ್ನಾಡಿ ಹೌಸ್ನ ಅಬೂಬಕರ್ ಮಗ ಮಸೂದ್ ಕೆ.ಎ ಆರೋಪಿಗಳಾಗಿದ್ದು, ಎನ್‌ಐಎ ಇವರಿಬ್ಬರ ಬಗ್ಗೆ ಮಾಹಿತಿ ನೀಡಿದವರಿಗೆ 10 ಲಕ್ಷ ರೂ. ಬಹುಮಾನವನ್ನು ಘೋಷಣೆ ಮಾಡಿದೆ. ಬೆಂಗಳೂರಿನ ದೊಮ್ಮಲೂರು ಬಳಿ ಇವರು NIAಯ SP ಗೆ ಮಾಹಿತಿ ನೀಡಲು ಮನವಿ ಮಾಡಲಾಗಿದೆ. ಎನ್‌ಐಎ ತಂಡ ಇತ್ತೀಚೆಗೆ ಮೂವರು ಆರೋಪಿಗಳನ್ನು ಬಂಧಿಸಿತ್ತು.
ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಕೋಳಿ ಅಂಗಡಿ ನಡೆಸುವ ವ್ಯಾಪಾರ ಮಾಡುತ್ತಿದ್ದರು. ಒಂದು ದಿನ ಪೇಟೆಯಲ್ಲಿ ತನ್ನ ಅಂಗಡಿ ಮುಚ್ಚುತ್ತಿದ್ದಾಗ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿ ಪರಾರಿಯಾಗಿದ್ದರು. ಗಂಭೀರ ಗಾಯಗೊಂಡಿದ್ದ ಪ್ರವೀಣ್ ನೆಟ್ಟಾರು ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಪ್ರವೀಣ್ ನೆಟ್ಟಾರು ಸಾವನ್ನಪ್ಪಿದ್ದರು.
