Viral Video : ಬಿಜೆಪಿ ನಾಯಕರೊಬ್ಬರು ರಾಷ್ಟೀಯ ಹೆದ್ದಾರಿಯಲ್ಲಿ ಕಾರಿನಿಂದ ಇಳಿದು ಮಹಿಳೆಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ ವಿಚಿತ್ರ ಘಟನೆ ಒಂದು ನಡೆದಿದ್ದು, ಇದರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.
ಹೌದು, ಮಧ್ಯಪ್ರದೇಶದ ಮಂಡ್ಸೌರ್ನ ಜಿಲ್ಲಾ ಪಂಚಾಯತ್ ಸದಸ್ಯ, ಬಿಜೆಪಿ ನಾಯಕ ಮನೋಹರ್ ಲಾಲ್ ಧಾಕಡ್ ರಾಷ್ಟೀಯ ಹೆದ್ದಾರಿಯಲ್ಲಿ ಕಾರಿನಿಂದ ಇಳಿದು ಮಹಿಳೆಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಬಿಜೆಪಿ ನಾಯಕನ ವಿರುದ್ಧ ಪ್ರಕರಣ ದಾಖಲಾಗಿದೆ.
ಏತನ್ಮಧ್ಯೆ, ಧಕಾಡ್ ಮಹಾಸಭಾ ಯುವ ಸಂಘ ಅವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ತೆಗೆದುಹಾಕಿದೆ. ಬಿಜೆಪಿ ಕೂಡ ಧಕಾಡ್ನಿಂದ ದೂರ ಸರಿದಿದೆ. ಅವರು ಪಕ್ಷದ ಪ್ರಾಥಮಿಕ ಸದಸ್ಯರಲ್ಲ ಮತ್ತು ಆನ್ಲೈನ್ ನೋಂದಣಿ ಮೂಲಕ ಸೇರಿದ್ದಾರೆ ಎಂದು ಪಕ್ಷ ಸ್ಪಷ್ಟನೆನೀಡಿದೆ.
https://x.com/ashishyadavi/status/1925885403384487970?t=wRn587FLNJ4Ijmje3N_tBg&s=19
ಇನ್ನು ರಾಜ್ಯ ಬಿಜೆಪಿ ವಕ್ತಾರ ಯಶ್ಪಾಲ್ ಸಿಂಗ್ ಸಿಸೋಡಿಯಾ, ಪಕ್ಷವು ಆರೋಪವನ್ನು ಗಣನೆಗೆ ತೆಗೆದುಕೊಂಡು, ಪರಿಶೀಲಿಸಿ ಕಟ್ಟುನಿಟ್ಟಿನ ಶಿಸ್ತನ್ನು ತೆಗೆದುಕೊಳ್ಳಲಿದೆ ಎಂದು ಹೇಳಿದ್ದಾರೆ. ಧಾಕಡ್ ಬಿಜೆಪಿಯ ಪ್ರಾಥಮಿಕ ಸದಸ್ಯರಲ್ಲ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ವಿ.ಡಿ. ಶರ್ಮಾ ಕೂಡಾ ಹೇಳಿದ್ದಾರೆ.
