Dharmasthala: ಬೆಂಗಳೂರಿನ ನಿವಾಸಿ ಪರಮೇಶ್ ವಿ ಅವರು ” ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ಅವರು ಸಾಕ್ಷಿ ಮತ್ತು ದೂರುದಾರರಿಗೆ ಬೆದರಿಕೆ ಹಾಕಿದ್ದಾರೆ. ಹಾಗೂ ಸಾಕ್ಷಿಯ ವಿವರಗಳನ್ನು ಸಾರ್ವಜನಿಕವಾಗಿ ಬಹಿರಂಗಪಡಿಸುವ ಮೂಲಕ ತನಿಖೆಗೆ ಅಡ್ಡಿಪಡಿಸಲು ಪ್ರಯತ್ನಿಸಿದ್ದಾರೆ” ಎಂದು ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡಕ್ಕೆ ದೂರು ಸಲ್ಲಿಸಿದ್ದಾರೆ.
ಭಾನುವಾರ ಎಸ್.ಐ.ಟಿ ಮುಖ್ಯಸ್ಥರಿಗೆ ಸಲ್ಲಿಸಿದ ದೂರಿನಲ್ಲಿ ಪರಮೇಶ್, ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಅವರು ಧರ್ಮಸ್ಥಳ ಕ್ಷೇತ್ರದ ವಿರುದ್ಧ ಸುಳ್ಳು ಪ್ರಚಾರ ನಡೆಸಲಾಗುತ್ತಿದೆ ಎಂದು ಹೇಳಿಕೊಳ್ಳುತ್ತಾ, ನಡೆಯುತ್ತಿರುವ ಎಸ್.ಐ.ಟಿ ತನಿಖೆಗೆ ಸಂಬಂಧಿಸಿದ ಕೆಲವು ಗೌಪ್ಯ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ. ಸಾಕ್ಷಿ-ದೂರುದಾರರ ಬಗ್ಗೆಯೂ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.
ಹಲವು ಸ್ಥಳಗಳಲ್ಲಿ ಅತ್ಯಾಚಾರ ಮತ್ತು ಕೊಲೆ ಸಂತ್ರಸ್ತರ ಶವಗಳನ್ನು ಹೂಳಿದ್ದಾರೆ ಎಂದು ಅನಾಮಿಕ ವ್ಯಕ್ತಿಯೊಬ್ಬರು ಆರೋಪಿಸಿದ್ದಾರೆ . ಈ ವ್ಯಕ್ತಿಗೆ ಅತ್ಯಾಚಾರ ಮತ್ತು ಕೊಲೆಯ ಬಗ್ಗೆ ತಿಳಿದಿದ್ದರೆ, ಆತನೆ ಮೊದಲ ಅಪರಾಧಿಯಾಗಬೇಕು ಹಾಗೂ ಅವರನ್ನು ಗಲ್ಲಿಗೇರಿಸಬೇಕು ಎಂದು ವಿಶ್ವನಾಥ್ ಹೇಳುತ್ತಿರುವುದು ಕಂಡುಬರುತ್ತದೆ.
ನ್ಯಾಯಾಲಯದ ನಿರ್ದೇಶನದ ಮೇರೆಗೆ, ಸಾಕ್ಷಿ-ದೂರುದಾರರು ನ್ಯಾಯಾಲಯದ ಮುಂದೆ ಹೇಳಿಕೆ ದಾಖಲಿಸಿದ ನಂತರ, ಶಾಸಕ ವಿಶ್ವನಾಥ್ ದೂರುದಾರರಿಗೆ ಗಲ್ಲಿಗೇರಿಸುವಂತೆ ಕೇಳುವ ಮೂಲಕ ಜೀವ ಬೆದರಿಕೆ ಹಾಕಿದ್ದಾರೆ ಎಂದು ಪರಮೇಶ್ ಆರೋಪಿಸಿದ್ದಾರೆ. ಶಾಸಕರ ವೀಡಿಯೊವನ್ನು ವೀಕ್ಷಿಸಿದ ನಂತರ, ದೂರುದಾರರು ಜೀವಕ್ಕೆ ಬೆದರಿಕೆ ಇದೆ ಎಂಬ ಭಯದಿಂದ ತನಿಖೆಗೆ ಸಹಕರಿಸಲು ನಿರಾಕರಿಸಿದರೆ, ಅದು ನಡೆಯುತ್ತಿರುವ ತನಿಖೆಯನ್ನು ಹಳಿತಪ್ಪಿಸುವ ಸಾಧ್ಯತೆ ಹೆಚ್ಚು ಎಂದು ಆತಂಕ ವ್ಯಕ್ತ ಪಡಿಸಿದ್ದಾರೆ.
Tech summit: ಬೆಂಗಳೂರಿನಲ್ಲಿ ಏಷ್ಯಾದ ಅತಿ ದೊಡ್ಡ ಟೆಕ್ ಶೃಂಗ ಸಭೆ ಆಯೋಜನೆ : ಸರ್ಕಾರದಿಂದ 28ನೇ ಆವೃತ್ತಿ ಘೋಷಣೆ
