3
BJP MP Tejasvi Surya: ಇಂದು ಸಂಸದ ತೇಜಸ್ವಿ ಸೂರ್ಯ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ರೆಸಾರ್ಟ್‌ನಲ್ಲಿ ತೇಜಸ್ವಿ ಸೂರ್ಯ ಮತ್ತು ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ ಮದುವೆ ಎರಡು ಕುಟುಂಬದ ಸದಸ್ಯರು ಮತ್ತು ಅತ್ಯಾಪ್ತರ ಸಮ್ಮುಖದಲ್ಲಿ ನಡೆದಿದೆ.
ಇಂದು ಬೆಳಗ್ಗೆ 10.45 ತುಲಾ ಲಗ್ನದಲ್ಲಿ ಶಿವಶ್ರೀ ಕೊರಳಿಗೆ ತೇಜಸ್ವಿ ಸೂರ್ಯ ಮಾಂಗಲ್ಯಧಾರಣೆ ಮಾಡಿದ್ದಾರೆ. ಇಂದು ಶಿವಶ್ರೀ ಅವರನ್ನು ಮನೆ ತುಂಬಿಸಿಕೊಳ್ಳುವ ಶಾಸ್ತ್ರ ನಡೆಯಲಿದೆ. ಮದುವೆಗೆ ಕೇಂದ್ರ ಸಚಿವ ವಿ.ಸೋಮಣ್ಣ ಮದುವೆಗೆ ಬಂದಿದ್ದು, ನವಜೋಡಿಗೆ ಆಶೀರ್ವದಿಸಿದ್ದಾರೆ.
