Home » Sullia: ಸುಳ್ಯದಲ್ಲಿ ನಡೆದ ಕೊರಗಜ್ಜನ ಕೋಲದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭಾಗಿ

Sullia: ಸುಳ್ಯದಲ್ಲಿ ನಡೆದ ಕೊರಗಜ್ಜನ ಕೋಲದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭಾಗಿ

0 comments

Sullia: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಇತರೆ ಬಿಜೆಪಿ ಮುಖಂಡರು ಕೊರಗಜ್ಜನ ಕೋಲದಲ್ಲಿ ಭಾಗಿಯಾಗಿದ್ದು, ದೈವದ ಆಶೀರ್ವಾದ ಪಡೆದಿದ್ದಾರೆ.

ಸುಳ್ಯದ ಜಯನಗರದ ಶ್ರೀ ನಾಗಬ್ರಹ್ಮ ಆದಿಮೊಗೇರ್ಕಳ ದೈವಸ್ಥಾನ ಶ್ರೀ ಗುಳಿಗ ದೈವ ಹಾಗೂ ಕೊರಗಜ್ಜ ದೈವಸ್ಥಾನದಲ್ಲಿ ನಡೆದ ಕೊರಗಜ್ಜ ದೈವದ ನೇಮ ಮತ್ತು ಪರಿಹಾರ ದೈವಗಳ ತಂಬಿಲ ಸೇವೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು ಪಾಲ್ಗೊಂಡಿದ್ದಾರೆ.

ಈ ಸಂದರ್ಭದಲ್ಲಿ ಸಂಸದರು, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜ, ಕಿಶೋರ್‌ ಕುಮಾರ್‌ ಬೊಟ್ಯಾಡಿ, ಮಾಜಿ ಸಚಿವ ಎಸ್‌. ಅಂಗಾರ ಸಹಿತ ಹಲವು ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

You may also like