4
Siruguppa BJP Youth Leader: ಬಿಜೆಪಿ ಯುವ ಮುಖಂಡನ ಮೇಲೆ ಅಪ್ರಾಪ್ತೆ ಮೇಲೆ ಅತ್ಯಾಚಾರ ಮಾಡಿರುವ ಆರೋಪದ ಮೇರೆಗೆ ಸಿರಿಗೇರಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಯ ಬಂಧನ ಮಾಡಿ ವಿಚಾರಣೆಗೊಳಪಡಿಸಿದ್ದಾರೆ.
ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ಬಿಜೆಪಿ ಯುವ ಮುಖಂಡ ದೇವು ನಾಯಕ ಎನ್ನುವಾತ ಓರ್ವ ಮಹಿಳೆ ಸಹಾಯದಿಂದ 7 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿರುವ ಆರೋಪ ಕೇಳಿ ಬಂದಿದೆ.
ಸ್ಥಳೀಯ ಜಿಲ್ಲಾ ಪಂಚಾಯಿತಿ ಟಿಕೆಟ್ ಆಕಾಂಕ್ಷಿಯಾಗಿದ್ದು, ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿಕೊಂಡಿದ್ದಾನೆ. ರಾಜ್ಯ, ರಾಷ್ಟ್ರ ನಾಯಕರ ಜೊತೆ ಫೋಟೋ ಕ್ಲಿಕ್ ಮಾಡಿದ್ದಾನೆ. ಅವುಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾನೆ.
