Home News ಬಿಜೆಪಿ ಹೊಸ ಸಾರಥಿ ನಿತಿನ್ ನವೀನ್

ಬಿಜೆಪಿ ಹೊಸ ಸಾರಥಿ ನಿತಿನ್ ನವೀನ್

0
4
Karnataka BJP

ಹೊಸದಿಲ್ಲಿ: ಭಾರತೀಯ ಜನತಾ ಪಕ್ಷದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನವೀನ್ ಸೋಮವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 45 ವರ್ಷದ ನಿತಿನ್ ಈ ಹುದ್ದೆಗೆ ಆಯ್ಕೆಯಾದ ಅತಿ ಕಿರಿಯ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಬಿಜೆಪಿ ಹಿರಿಯ ನಾಯಕ ಮತ್ತು ಚುನಾವಣಾಧಿ ಕಾರಿಯಾಗಿದ್ದ ಕೆ. ಲಕ್ಷ್ಮಣ್ ಅವರು ನಿತಿನ್ ನವೀನ್ ಅವರ ಆಯ್ಕೆಯನ್ನು ಘೋಷಿಸಿದರು. ಇತ್ತೀಚೆಗಷ್ಟೇ ಪಕ್ಷದ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ಆಯ್ಕೆಯಾಗಿದ್ದ ಬಿಹಾರ ಮೂಲದ ಬಿಜೆಪಿ ಶಾಸಕ ನಿತಿನ್ ನವೀನ್ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹುದ್ದೆಗೆ ಸೋಮವಾರ ಮಧ್ಯಾಹ್ನ ನಾಮಪತ್ರ ಸಲ್ಲಿಸಿದ್ದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿ ಸಿದ್ದ ನವೀನ್ ಪರವಾಗಿ 37 ಸೆಟ್ ನಾಮಪತ್ರ ಸಲ್ಲಿಸಲಾಗಿತ್ತು. ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಸೇರಿ ಹಿರಿಯ ನಾಯಕರು ಒಟ್ಟುಗೂಡಿ ನವೀನ್ ಪರವಾಗಿ ನಾಮಪತ್ರ ಸಲ್ಲಿಸಿದ್ದರು. ನಿತಿನ್ ನವೀನ್ ಉಮೇದು ವಾರಿಕೆಯನ್ನು ಪ್ರಧಾನಿ ನರೇಂದ್ರ ಮೋದಿ ಬೆಂಬಲಿಸಿದ್ದರು. ನಿರ್ಗಮಿತ ಅಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್, ನಿತಿನ್ ಗಡ್ಕರಿ ಸೇರಿ ಹಿರಿಯ ನಾಯಕರು ಅನುಮೋದಿಸಿದ್ದರು.

”ಸೋಮವಾರ ಮಧ್ಯಾಹ್ನ 2 ರಿಂದ ಸಂಜೆ 4 ರವರೆಗೆ ನಾಮಪತ್ರ ಸಲ್ಲಿಸಲಾ ಯಿತು. ಸಂಜೆ 4 ರಿಂದ 5 ರವರೆಗೆ ನಾಮ ಪತ್ರಗಳ ಪರಿಶೀಲನೆ ನಡೆಯಿತು. ನವೀನ್ ಅವರೊಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ,” ಎಂದು ಚುನಾವಣಾ ಅಧಿಕಾರಿಯಾಗಿದ್ದ ಕೆ.ಲಕ್ಷ್ಮಣ್ ಪ್ರಕಟಿಸಿದರು.