2
OYO: ಓಯೋ ರೂಮ್ ಒಂದರಲ್ಲಿ ಎಂಟನೇ ತರಗತಿಯ ವಿದ್ಯಾರ್ಥಿನಿ ಮತ್ತು ಶಾಲಾ ಶಿಕ್ಷಕನ ಶವ ಪತ್ತೆಯಾಗಿರುವ ಪ್ರಕರಣ ಉತ್ತರ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ.
ಹೌದು, ಉತ್ತರ ಪ್ರದೇಶದ ಅಲಿಘರ್‌ನ ರೋರಾವರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಿ ರಾಯಲ್ ರಿಟ್ರೀಟ್ ಹೊಟೇಲ್‌ನ ಕೊಠಡಿಯೊಂದರಲ್ಲಿ ಶಿಕ್ಷಕ ಮತ್ತು ವಿದ್ಯಾರ್ಥಿನಿಯ ಶವ ಪತ್ತೆಯಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಇಬ್ಬರೂ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ ಎಂದು ಅಲಿಘರ್ ಪೊಲೀಸರು ತಿಳಿಸಿದ್ದಾರೆ.
ಮಾಹಿತಿಯ ಪ್ರಕಾರ, ಮೃತ ಬಾಲಕಿ 8ನೇ ತರಗತಿಯ ವಿದ್ಯಾರ್ಥಿನಿ ಎಂದು ತಿಳಿದುಬಂದಿದ್ದು, ಅಂತಹ ವಯಸ್ಸಿನವರಿಗೆ ಹೊಟೇಲ್ ಪ್ರವೇಶ ಹೇಗೆ ಸಾಧ್ಯವಾಯಿತು ಎಂಬ ಬಗ್ಗೆ ಸಾರ್ವಜನಿಕರು ಕಿಡಿಕಾರಿದ್ದಾರೆ.
